ಎಸ್‍ಸಿಪಿ, ಟಿಎಸ್‍ಪಿಯಡಿ ಉತ್ತಮ ಸಾಧನೆ : ಎಡಿಸಿ ಮುರಗಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಕಳೆದ 2021-22ನೇ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಯಡಿ ಒಟ್ಟು 14 ಇಲಾಖೆಗಳು ಶೇಕಡಾ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದ ಅವರು ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿಬೃದ್ದಿ, ಸಣ್ಣ ನೀರಾವರಿ, ಮೀನುಗಾರಿಕೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು, ಜಿಲ್ಲಾ ಕೈಗಾರಿಕಾ ಕೇಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಅರಣ್ಯ ಇಲಾಖೆ, ಇಂಧನ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗ, ಕೃಷಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಶೇ.100 ರಷ್ಟು ಪ್ರಗತಿ ಸಾಧಿಸಿದ್ದಕ್ಕೆ ಅಪರ ಜಿಲ್ಲಾಧಿಕಾರಿ ಅಭಿನಂಧಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆಯಾಗಿ ವಿಶೇಷ ಘಟಕ ಯೋಜನೆಯಡಿ ಶೇ.94.38 ಹಾಗೂ ಗಿರಿಜನ ಉಪಯೋಜನೆಯಡಿ ಶೇ.94340 ರಷ್ಟು ಪ್ರಗತಿಯಾಗಿರುತ್ತದೆ. ಮುಂದಿನ ದಿನಗಳಲ್ಲಿ ಸಹ ಉತ್ತಮ ಪ್ರಗತಿ ಸಾಧಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಇತರೆ ಇಲಾಖೆಯವರು ಶೇ.100 ರಷ್ಟು ಸಾಧನೆ ಮಾಡಿದ ಇಲಾಖೆಗಳ ಅನುಕರಣೆ ಮಾಡಲು ತಿಳಿಸಿದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ವಿವಿಧ ಇಲಾಖೆಯ ಪ್ರಗತಿಯ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ್‍ಕುಮಾರ ಬಾವಿದಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಕೊಣ್ಣೂರ ಸೇರಿದಂತೆ ಇತರರಯ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*