ಇಂದು ಅಧಿಕೃತವಾಗಿ ಬಿ.ಜೆ.ಪಿ ಸೇರಿದ ಜೆ.ಡಿ.ಎಸ್ ಮುಖಂಡ ಬಸವರಾಜ್ ಹೊರಟ್ಟಿ.

ವರದಿ:ಅಂಬಿಗ ನ್ಯೂಸ್ ತಂಡ

ರಾಜ್ಯ ಸುದ್ದಿಗಳು

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು, ಮಂಗಳವಾರ (ಮೇ 3) ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ನಗರದ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಜೆಡಿಎಸ್‌ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿ ಸೇರ್ಪಡೆ ಯಾಗುತ್ತಿದ್ದೇನೆ ಎಂದು ತಿಳಿಸಿದರು.

ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್ ಅಶೋಕ್, ಸರಳ ಸಜ್ಜನ ರಾಜಕಾರಣಿಯಾದ ಹೊರಟ್ಟಿ ಶಿಕ್ಷಕರ ಕ್ಷೇತ್ರದಿಂದ 7 ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದಾರೆ. ಅವರ ಸೇರ್ಪಡೆಯಿಂದ ಬಿಜೆಪಿ ವರ್ಚಸ್ಸು ಹೆಚ್ಚುತ್ತದೆ. ಹೊರಟ್ಟಿಯವರು ರಾಜಕೀಯ ಮುತ್ಸದ್ದಿ. ಅವರ ಪಕ್ಷ ಸೇರ್ಪಡೆ ಮುಂದಿನ ಚುನಾವಣೆಗೆ ಇದು ದಿಕ್ಸೂಚಿ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*