ರಾಜ್ಯ ಸುದ್ದಿಗಳು
ಬೆಂಗಳೂರು:ಅಲೆಮಾರಿ,ಕೊಳಚೆ,ಮಕ್ಕಳ,ಪಟ್ಟಣ ಪಂಚಾಯತಿ,ಪುರಸಭೆ ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಬದಲಾವಣೆ, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ, ಗೌರವಧನ 7000 ದಿಂದ 12000 ಕ್ಕೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ದಿನಾಂಕ 04/05/2022ರಂದು ಸರ್ಕಾರದ ಆದೇಶ ಸಂಖ್ಯೆ: ಇಪಿ 46 ಎಲ್‌ಐಬಿ 2021, ಬೆಂಗಳೂರು ದಿನಾಂಕ:01.05.2022 ರಂತೆ ಸರ್ಕಾರದ ಅಧೀನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ (ಸಾಮಾನ್ಯ)ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ ಹೆಚ್ಚಿದ ಗಂಟೆಗಳು ಮತ್ತು ವಿಭಜಿತ ಸಮಯವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವ್ಯಾಪ್ತಿಯಲ್ಲಿನ ಪಟ್ಟಣ ಪಂಚಾಯತಿ,ಪುರಸಭೆ ಮತ್ತು ಮಹಾನಗರ ಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 150 ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾಲಕರಿಗೆ ಮತ್ತು 127 ಅಲೆಮಾರಿ,100 ಕೊಳಚೆ ಪ್ರದೇಶ ಹಾಗೂ 31 ಮಕ್ಕಳ ಸಮುದಾಯ ಗ್ರಂಥಾಲಯಗಳ ಮತ್ತು ಆಯಾಗಳ ಗೌರವ ಸಂಭಾವನೆಯನ್ನು ಈ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಲಾಗಿದೆ.
ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಪ್ರಸ್ತುತ ಗ್ರಂಥಾಲಯಗಳಲ್ಲಿ ನಿರ್ವಹಿಸಲಾಗುತ್ತಿರುವ ಕಾರ್ಯವಿಧಾನ ಬದಲು ಗಂಥಾಲಯಗಳನ್ನು ಹೆಚ್ಚಾಗಿ ಅವಲಂಬಿಸುವಂತೆ ಅಗತ್ಯ ಕ್ರಮವಹಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿ, ಸಮಯ ಬದಲಾವಣೆ, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ, ಗೌರವಧನ 7000 ದಿಂದ 12000 ಕ್ಕೆ ಹೆಚ್ಚಿಸಿಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.
Be the first to comment