ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು ಬಾಗಲಕೋಟೆ ಡಿಸಿಯಾಗಿದ್ದಂತ ಡಾ.ರಾಜೇಂದ್ರ ಐಎಎಸ್ ಇವರನ್ನು ಸೇರಿ 17 ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು,ಬಾಗಲಕೋಟೆ ಡಿಸಿಯಾಗಿದ್ದಂತ ಡಾ.ರಾಜೇಂದ್ರ ಕೆ ಅವರನ್ನು ವರ್ಗಾವಣೆ ಮಾಡಿದ್ದು, ಕರ್ನಾಟಕ ಲೋಕಸೇವಾ ಆಯೋಗ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಶ್ರೀ ಭೂಬಾಲನ್ ಟಿ., ಐಎಎಸ್ (ಕೆಎನ್: 2015), ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಬಾಗಲಕೋಟ ಜಿಲ್ಲೆ ಬಾಗಲಕೋಟ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಡೆಪ್ಯೂಟಿ ಕಮಿಷನರ್ ಹುದ್ದೆಯ ಸಮಕಾಲೀನ ಪ್ರಭಾರದಲ್ಲಿ ಇರಿಸಲಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Be the first to comment