ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಪೊಮ್ಮಲ್ ಸುನೀಲಕುಮಾರ ಬಾಗಲಕೋಟೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಯಾಗಿದ್ದಾರೆ.ಪೊಮ್ಮಲ ಸುನೀಲ್ ಕುಮಾರ್ ಅವರು 2011ನೇ ಬ್ಯಾಚ್ ಐಎಎಸ್ ಅಧಿಕಾರಿ.
ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಪೊಮ್ಮಲ ಸುನೀಲ್ ಕುಮಾರ್ ಅವರು ಆಂಧ್ರಪ್ರದೇಶದ ಕಡಪ ಜಿಲ್ಲೆಯವರು. ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿ ಪಡೆದಿದ್ದಾರೆ. ತಮಿಳುನಾಡಿನ ಚೆನ್ನೈ ಮತ್ತು ಅಮೆರಿಕಾದ ನ್ಯೂಜೆರ್ಸಿಯಲ್ಲಿ ಅವರು ಸಾಫ್ಟ್ ವೇರ್ ಇಂಜಿನಿಯರ್ ಆಗಿ ವಿವಿಧ ಕಂಪನಿಗಳಲ್ಲಿ ಸುಮಾರು 7 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.
ಸಾಫ್ಟ್ ವೇರ್ ಇಂಜಿನಿಯರ್ ಕೆಲಸಕ್ಕೆ ರಾಜೀನಾಮೆ ನೀಡಿ ಶ್ರಮಪಟ್ಟು ವ್ಯಾಸಂಗ ಮಾಡಿ, ಯುಪಿಎಸ್ಸಿ ಪರೀಕ್ಷೆ ಬರೆದು, 2011 ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದರು. ಹಾಸನ ಜಿಲ್ಲೆಯಲ್ಲಿ ಐಎಎಸ್ ಟ್ರೈನಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಳಿಕ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ ಒಂದು ವರ್ಷ 4 ತಿಂಗಳು ಸೇವೆ ಸಲ್ಲಿಸಿದ್ದಾರೆ.
ಯಾದಗಿರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 7 ತಿಂಗಳು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ಸುಮಾರು 2 ವರ್ಷ, ಬೆಂಗಳೂರಿನಲ್ಲಿ ವಸತಿ ಇಲಾಖೆಯಲ್ಲಿ ರಿಯಲ್ ಎಸ್ಟೇಟ್ ರೆಗ್ಯುಲಾರಿಟಿ ಅಥಾರಿಟಿಯಲ್ಲಿ ಕಾರ್ಯದರ್ಶಿಗಳಾಗಿ,ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
Be the first to comment