ಜಿಲ್ಲಾ ಸುದ್ದಿಗಳು
ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 30ರಿಂದ ಜೂನ್ 1ರವರೆಗೆ ನಡೆಯಲಿದ್ದು, ಈಗಾಗಲೇ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಇಳಕಲ್ ತಾಲ್ಲೂಕಿನ ನೌಕರ ಕ್ರೀಡಾಪಟುಗಳು ತಪ್ಪದೇ ಭಾಗವಹಿಸಬೇಕು ಎಂದು ತಾಲ್ಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ ಮನವಿ ಮಾಡಿದ್ದಾರೆ.
ಬಾಗಲಕೋಟೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ 30,31ರಂದು ಹಾಗೂ 1 ನೇ ಜೂನ್ 2022 ರವರೆಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ “ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ”ಗಳನ್ನು ಆಯೋಜಿಸಲಾಗಿದೆ.
ರಾಜ್ಯಾದ್ಯಂತ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ರವರು ಮೇ 30 ರ ಸೋಮವಾರ ಸಂಜೆ 4:30 ಕ್ಕೆ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು ಸಚಿವ ಸಂಪುಟದ ಹಲವು ಸಚಿವರು ಗಣ್ಯರು,ರಾಜ್ಯ,ಜಿಲ್ಲೆ, ತಾಲ್ಲೂಕು ಸಂಘದ ಪದಾಧಿಕಾರಿಗಳು, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರ್ಯಾಕ್ ಸೂಟ್ ವಿತರಿಸಲಾಗುವುದು,ಎಲ್ಲಾ ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ರುಚಿ ಶುಚಿಯಾದ ಉಪಹಾರ ಕಲ್ಪಿಸಲಾಗುವುದು, ಅಖಿಲ ಭಾರತ ನಾಗರಿಕ ಸೇವಾ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಸಹ ಅಭಿನಂದಿಸುವುದು ಹಾಗೂ ಮೇ 30 ರ ಸಂಜೆ 6 ಗಂಟೆಗೆ ಖ್ಯಾತ ಗಾಯಕರಾದ ವಿಜಯ ಪ್ರಕಾಶ್ ಅವರ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಎಂ ಎಚ್ ಗೌಡರ,ಗುಂಡಪ್ಪ ಎ ಕುರಿ,ಎಸ್ ಎನ್ ಗಡೇದ ರವರು ಉಪಸ್ಥಿತರಿದ್ದರು.
Be the first to comment