ಜಿಲ್ಲಾ ಸುದ್ದಿಗಳು
ಪೊಲೀಸರು ತನಗೆ ಹೊಡೆಯುತ್ತಿರುವುದನ್ನು ಮೊಬೈಲ್ ಫೋನ್‌ನಲ್ಲಿ ವಿಡಿಯೊ ಮಾಡಿಕೊಳ್ಳಲು ಮುಂದಾದ ತೇರದಾಳದ ವಿದ್ಯಾರ್ಥಿ ಮೇಲೆ ಪೊಲೀಸರು ಮತ್ತಷ್ಟು ಜೋರಾಗಿ ಥಳಿಸಿದ್ದಾರೆ ಎನ್ನಲಾಗಿದೆ.
ಬಾಗಲಕೋಟೆ: ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ.
ತೆರೆದಾಳ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ನವೀದ್ ಹಸನಾಸಾಬ್ ತರಾತರಿ ನೀಡಿದ್ದ ದೂರಿನ ಆಧಾರದ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ನಿರ್ದೇಶನದಂತೆ ಸಬ್ ಇನ್ಸ್ ಪೆಕ್ಟರ್ ಮತ್ತಿತರ ಐವರು ಪೊಲೀಸರ ವಿರುದ್ಧ ಮೇ 24 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಕಾಲೇಜ್ ಒಳಗಡೆ ಟೋಫಿ ಧರಿಸುವುದಕ್ಕೆ ಸರ್ಕಾರದ ಆದೇಶವಿಲ್ಲದಿದ್ದರೂ ಟೋಫಿ ಧರಿಸಿ ಕಾಲೇಜ್ ಗೆ ಹೋಗಿದ್ದಕ್ಕೆ ಪ್ರಿನ್ಸಿಪಾಲ್ ಪ್ರವೇಶ ನೀಡಲಿಲ್ಲ ಹಲ್ಲೆಗೊಳಗಾದ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾನೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೂಡಾ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ನಂಬಿಕೆಯನ್ನು ಅಪಮಾನಿಸಿದ್ದಾನೆ ಎಂದು ಆರೋಪಿಸಿದ್ದಾನೆ. ಏತನ್ಮದೆ ಈ ವಿಚಾರದ ಬಗ್ಗೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
Be the first to comment