ರಾಜ್ಯ ಸುದ್ದಿಗಳು
ಬೆಂಗಳೂರು : 3 ವರ್ಷದ ಡಿಪ್ಲೋಮಾ, ಐಟಿಐ ಹಾಗೂ ವೃತ್ತಿ ಶಿಕ್ಷಣ ಕೋರ್ಸ್ ಗಳ ವಿದ್ಯಾರ್ಹತೆಯನ್ನೂ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಡಿಪ್ಲೋಮಾ, ಜೆಓಸಿ, ಐಟಿಐ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಲಿಖಿತ ಸೂಚನೆ ನೀಡಿದ್ದಾರೆ.
ಎಲ್ಲ ಸರ್ಕಾರಿ ಹುದ್ದೆಗಳ ಆಯ್ಕೆಗೂ ಇದೇ ಮಾನದಂಡ ಅನ್ವಯವಾಗಲಿದೆ ಎನ್ನಲಾಗಿದೆ.ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪಿಯುಸಿ ಮತ್ತು ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ ನೇಮಕಾತಿ ಹೊಂದಿ ಆದೇಶ ಪತ್ರದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಜೆಓಸಿ ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ದಿಪ್ಲೋಮಾ ಪಿಯುಸಿ ತತ್ಸಮಾನವಾಗಿರುತ್ತದೆ. 3 ವರ್ಷಗಳ ಡಿಪ್ಲೋಮಾ, ಜೆಓಸಿಯನ್ನು 2018,2019,2020 ರ ಅಭ್ಯರ್ಥಿಗಳಿಗೆ ಹಾಗೂ 2015ಕ್ಕಿಂತ ಹಿಂದಿನಿಂದಲೂ ಪೂರ್ವಾನ್ವಯವಾಗುವಂತೆ ಪಿಯುಸಿ ತತ್ಸಮಾನತೆಯನ್ನು ಸರ್ಕಾರದ ಆದೇಶಗಳನ್ವಯ ನೀಡಬಹುದಾಗಿದೆ.
Be the first to comment