ರಾಜ್ಯ ಸುದ್ದಿಗಳು
ಬೆಂಗಳೂರು ಮೇ.31:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ತೋಟಗಾರಿಕೆ ಸಚಿವ ಮುನಿರತ್ನ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.
Be the first to comment