ಜಿಲ್ಲಾ ಸುದ್ದಿಗಳು
ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ, ವಿಶ್ವ ಪರಿಸರ ದಿನವು ಹೊಸ ಉದ್ದೇಶಗಳಿಂದ ಮುನ್ನೆಲೆಗೆ ಬರುತ್ತದೆ.
ಬಾಗಲಕೋಟೆ: ಇಲಕಲ್ಲ ತಾಲೂಕಿನ ಕೆಲೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎಲ್ಲರಿಗೂ ‘ಒಂದೇ ಒಂದು ಭೂಮಿ’ ಧ್ಯೇಯವಾಕ್ಯದೊಂದಿಗೆ,ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ ಈ ವರ್ಷದ ಧ್ಯೇಯವಾಕ್ಯ ಎಲ್ಲರಿಗೂ ‘ಒಂದೆ ಒಂದು ಭೂಮಿ’.
ಕೆಲೂರ ಗ್ರಾಮವು ಬಾಗಲಕೋಟೆ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅರಣ್ಯ ಭೂಮಿ ಹೊಂದಿದ್ದು ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ.ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರ ಮಾತನಾಡಿದರು.
ವಿಶ್ವ ಪರಿಸರ ದಿನವನ್ನು 1974 ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972 ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 ಜೂನ್ 5 ರಂದು ಮೊದಲು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ.
ಮಾನವ ಸೇರಿದಂತೆ ಇತರ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ತನ್ನ ಅನುಕೂಲತೆಗಳಿಗಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರವೇ ಹಾಳಾಗುತ್ತಿದೆ. ಇದರಿಂದಾಲೇ ಹವಾಮಾನ ವೈಪರೀತ್ಯ, ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗ್ತಿದೆ. ಹೀಗಾಗಿಯೇ ಪರಿಸರವನ್ನು ಉಳಿಸುವಂತೆ ಜನರಿಗೆ ಎಚ್ಚರಿಕೆ ನೀಡಲು ಪರಿಸರ ದಿನವನ್ನು ಆಚರಿಸಲು ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ,ಸಹಾಯಕ ನಿರ್ದೇಶಕರು (MGNREGA) ಜಿ.ಎಸ್.ಶಿರಗುಪ್ಪಿ,ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪಿ.ಬಿ.ಮುಳ್ಳೂರ,ತಾಂತ್ರಿಕ ಸಂಯೋಜಕ ವಿಶ್ವನಾಥ ಹೆಬ್ಬಾಳ,ಐಇಸಿ ಸಂಯೋಜಕರಾದ ಶ್ರೀಮತಿ ಯಲ್ಲಮ್ಮ,ಗ್ರಾಮ ಪಂಚಾಯತಿ ಸದಸ್ಯರಾದ ರಮೇಶ ಕೊಪ್ಪದ,ಹನಮಂತ ವಡ್ಡರ,ಉಮೇಶ ಹೂಗಾರ,ವಿರೇಶ ಕಮತರ,ಬಾಬು ಸಿಮಿಕೇರಿ,ಅರಣ್ಯ ರಕ್ಷಕರಾದ ದೇವರಾಜ ನಾಯ್ಕರ,ಶರಣಪ್ಪ ಘಟ್ಟಿಗನೂರ,ಮಂಜುನಾಥ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಉಪಸ್ಥಿತರಿದ್ದರು.
Be the first to comment