ಮನೆ‌ಪಾಠಕ್ಕೆ ಮನೆಗೆ ಬಂದ ಬಿ.ಕಾಂ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಸಹಾಯಕ ಪ್ರಾಧ್ಯಾಪಕ!

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಹಾವೇರಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ವಿದ್ಯಾರ್ಥಿನಿ ಮೇಲೆ ರೇಪ್ ಆರೋಪ ಕೇಳಿ ಬಂದಿದ್ದು, ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.ನಿಂಗಪ್ಪ‌ ಕಲಕೋಟಿ ಎಂಬ ಪ್ರಾಧ್ಯಾಪಕ ಲೈಂಗಿಕ ಮನೆ ಪಾಠ ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಯಿಸಿ ಒಂದೂವರೆ ವರ್ಷಗಳಿಂದ ತನ್ನ ಮೇಲೆ ಏಳೆಂಟು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

CHETAN KENDULI

ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್​ ಸಹಾಯಕ ಪ್ರಾಧ್ಯಾಪಕನಾಗಿದ್ದ ನಿಂಗಪ್ಪನ ನಿರಂತರ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ವಿಷಯ ತಿಳಿದ ನಿಂಗಪ್ಪ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಇದೀಗ‌ ನಿಂಗಪ್ಪ ವಿರುದ್ಧ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ 376 (2)(N) ಮತ್ತು 506 ಅಡಿ ದೂರು ದಾಖಲಾಗಿದೆ.

Be the first to comment

Leave a Reply

Your email address will not be published.


*