ಜಿಲ್ಲಾ ಸುದ್ದಿಗಳು
ಭಟ್ಕಳ
ಉ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ೨೦೨೧-೨೨ನೇ ಸಾಲಿನ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಇದೇ ಜೂನ ೧೧ರ ಶನಿವಾರ ಮಧ್ಯಾಹ್ನ ೩ ಗಂಟೆಗೆ ಶಿರಾಲಿಯ ಜನತಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೇವಿದಾಸ ಮೊಗೇರ ಉದ್ಘಾಟಿಸಲಿದ್ದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಜಾರ್ಜ ಫರ್ನಾಂಡೀಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಪಿ.ಆರ್.ನಾಯ್ಕ ಆಶಯ ನುಡಿಗಳನ್ನಾಡುವರು ಹಾಗೂ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಪ್ರಶಂಸನಾ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಪ್ರೌಢ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಕುಮಾರ ನಾಯ್ಕ, ಮಾಧ್ಯಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಬ್ಬೀರ ದಫೇದಾರ ಹಾಗೂ ಜನತಾ ವಿದ್ಯಾಲಯದ ಪ್ರಾಚಾರ್ಯ ಅಮೃತ ರಾಮರಥ ಉಪಸ್ಥಿತರಿರಲಿದ್ದಾರೆ.
ಈ ಬಾರಿ ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಷತ ನೂರು ಅಂಕಗಳನ್ನು ಗಳಿಸಿಕೊಂಡಿರುವ ೧೨೨ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು, ಶಿಕ್ಷಕರು ಪಾಲಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಹಾಗೂ ತಾಲೂಕಾ ಕಸಾಪದ ಪರವಾಗಿ ಗಂಗಾಧರ ನಾಯ್ಕ ಕೋರಿದ್ದಾರೆ.
Be the first to comment