ಜಿಲ್ಲಾ ಸುದ್ದಿಗಳು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಸತಿ ನಿಲಯಗಳಿಗೆ 2022-23ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಬಾಗಲಕೋಟೆ:2022-23ನೇ ಸಾಲಿಗಾಗಿ ಹುನಗುಂದ,ಇಲಕಲ್ಲ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ 5 ರಿಂದ 10 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಪ್ರವರ್ಗ-1,2ಎ, 2ಬಿ, 3ಎ, 3ಬಿ ಪ.ಜಾತಿ, ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಖಾಲಿ ಇರುವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತಾಲೂಕಿನ ಸರ್ಕಾರಿ ಮೆಟ್ರಿಕ್ ಪೂರ್ವದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೂ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ http://bcwd.karnataka.gov.in ಗೆ ಭೇಟಿ ನೀಡಿ ದಿನಾಂಕ 30-06-2022ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ನಂತರ ಆನ್ಲೈನ್ ಸ್ವಿಕೃತಿ (Acknowledgement) ಪ್ರತಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಈ ಕಛೇರಿಗೆ ಸಲ್ಲಿಸುವುದು, ವಿದ್ಯಾರ್ಥಿಗಳನ್ನು ಮರಿಟ್ ಆಧಾರದ ಮೇಲೆ ವಿದ್ಯಾರ್ಥಿನಿಲಯಗಳಿಗೆ ಆಯ್ಕೆಮಾಡಲಾಗುವುದು,ಹೆಚ್ಚಿನ ಮಾಹಿತಿಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ,ಮೇಗಲಪೇಟೆ ರಾಜೀವ್ ಗಾಂಧಿ ಶಾಲೆ ಹಿಂಭಾಗ ಹುನಗುಂದ ಇವರನ್ನು ಸಂಪರ್ಕಿಸಬೇಕಾಗಿ ಈ ಮೂಲಕ ಪ್ರಕಟಣೆ ಹೊರಡಿಸಲಾಗಿದೆ.
Be the first to comment