ಕೇರಳದಿಂದ ಕಾಲ್ನಡಿಗೆಯಲ್ಲಿ ಹಜ್ ಯಾತ್ರೆಗೆ ಹೊರಟ ಶಿಹಾಬ್ ಚೊಟೂರು ಅವರನ್ನು ಭಟ್ಕಳದಲ್ಲಿ ಸ್ವಾಗತಿಸಿದ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಶರೀಫ್

ವರದಿ:ಕುಮಾರ ನಾಯ್ಕ

ಭಟ್ಕಳ-

ಕೇರಳದ ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕ ಶಿಹಾಬ್ ಚೊಟೂರು ಅವರನ್ನು ಇಂದು ಭಟ್ಕಳದಲ್ಲಿ ಸುನ್ನಿ ಯುವಜನ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕೆ.ಎಂ.ಶರೀಫ್ ಸ್ವಾಗತಿಸಿದರು.

ಕೇರಳದ ಮಲಪ್ಪುರಂ ಜಿಲ್ಲೆಯ ಕನಿಪುರದಲ್ಲಿ ಸೂಪರ್ ಮಾರ್ಕೆಟ್ ನಡೆಸುತ್ತಿರುವ ಶಿಹಾಬ್ ಚೊಟೂರು (30) ಹಜ್ ಯಾತ್ರೆಗೆ ಹೊರಟಿರುವ ಯುವಕ.

ಪಾದಯಾತ್ರೆ ಮೂಲಕ ಹಜ್ ಯಾತ್ರೆಗೆ ಹೊರಡಬೇಕೆಂದು ಸುಮಾರು 8 ತಿಂಗಳಿಂದ ಸಿದ್ಧತೆ ಮಾಡಿಕೊಂಡ ಶಿಹಾಬ್‌ಗೆ ವಿದೇಶಾಂಗ ವ್ಯವಹಾರ ಸಚಿವಾಲಯದಿಂದ ಎಲ್ಲ ಅನುಮತಿ ಪಡೆದುಕೊಳ್ಳಲು ಕೇಂದ್ರ ಸಚಿವ ವಿ. ಮುರುಳೀಧರನ್ ಸಹಿತ ಹಲವರು ಮಹನೀಯರು ನೆರವಾಗಿದ್ದಾರೆ. ಕೇರಳ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ತಾನ್, ಹರಿಯಾಣ, ಪಂಜಾಬ್, ವಾಘಾ ಗಡಿ ಮೂಲಕ ಪಾಕಿಸ್ತಾನ, ಇರಾಕ್, ಇರಾನ್, ಕುವೈಟ್ ಮತ್ತು ಸೌದಿ ಅರೇಬಿಯಾ ತೆರಳುವ ಅವರು, ಆಯಾ ವಿವಿಧ ದೇಶಗಳ ಗಡಿ ದಾಟಲು ವೀಸಾ ಹಾಗೂ ರಾಯಭಾರ ಕಚೇರಿಗಳಿಂದ ಅನುಮತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ.

ಇಂದು ಭಟ್ಕಳ ತಲುಪಿದ ಶಿಹಾಬ್ ಅವರಿಗೆ ಭವ್ಯ ಸ್ವಾಗತ ನೀಡಿ ಸುನ್ನಿ ಯುವಜನ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕೆ.ಎಂ.ಷರೀಫ್ ಬರಮಾಡಿಕೊಂಡರು.

ಈ ಯಾತ್ರೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಶಿಹಾಬ್ ‘ ಜೂನ್ 2 ರಂದು ಮಲಪ್ಪುರಂ ಯಿಂದ ಹೊರಟ ಇವರು ಒಟ್ಟು 8640ಕಿ,ಮೀ ಹಾದಿಯನ್ನು 280 ದಿನಗಳಲ್ಲಿ ತಲುಪುವುದು ನನ್ನ ಗುರಿ. ಪ್ರತಿದಿನ 25ಕಿ.ಮೀ ನಡೆಯುತ್ತಿದ್ದೇನೆ. ಒಂಭತ್ತು ತಿಂಗಳು 10 ದಿನಕ್ಕಿಂತ ಹೆಚ್ಚಿನ ದಿನದ ಪ್ರಯಾಣದ ಬಳಿಕ ಸೌದಿ ಅರೇಬಿಯಾ ತಲುಪಿ, 2023ನೇ ಸಾಲಿನ ಹಜ್‌ಗೆ ಅರ್ಜಿ ಹಾಕಿ ಹಜ್ ಪ್ರಕ್ರಿಯೆ ನಡೆಸುವುದು ನನ್ನ ಉದ್ದೇಶ. ಇದಕ್ಕೆ ನನ್ನ ಕುಟುಂಬ, ಗೆಳೆಯರ ಸಹಕಾರವಿದೆ’ ಎಂದು ಹೇಳಿದ್ದಾರೆ. ತನ್ನ ಜೊತೆ 10 ಕೆ.ಜಿ ತೂಕದ ಬ್ಯಾಗ್ ಒಂದಿದೆ. ಅದರಲ್ಲಿ ಮಲಗಲು ಹಾಸುವ ಬಟ್ಟೆ, ನಾಲ್ಕು ಟೀ ಶರ್ಟ್ಸ್ ಮತ್ತು ಪ್ಯಾಂಟ್‌ಗಳು, ಕೈಯಲ್ಲೊಂದು ಉದ್ದದ ಕೊಡೆ ಇದೆ. ದಾರಿ ಮಧ್ಯೆ ರಾತ್ರಿ ಮಸೀದಿಗಳಲ್ಲಿ ತಂಗುತ್ತಿದ್ದಾರೆ. ಜನರು ಅವರಿಗೆ ಅನ್ನಾಹಾರ ಕೊಟ್ಟು ಸತ್ಕರಿಸಿ ಬೀಳ್ಕೊಡುತ್ತಿದ್ದಾರೆ.ಇಂದು ಭಟ್ಕಳದಲ್ಲಿ ಸುನೀ ಯುವಜನ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ಷರೀಫ್ ನೇತೃತ್ವದ ಪದಾಧಿಕಾರಿಗಳು ಭವ್ಯ ಸ್ವಾಗತ್ ನೀಡಿ ಬೀಳ್ಕೊಟ್ಟರು.

Be the first to comment

Leave a Reply

Your email address will not be published.


*