ನಿಜಶರಣ ಜಯಂತೋತ್ಸವವು ನಿಜಶರಣರ ತತ್ವವು ಅನುಸರಿಸಿವಂತಾಗಬೇಕು  :ಶಾಸಕ ಅರವಿಂದ ಬೆಲ್ಲದ


ನಿಜಶರಣ ಜಯಂತೋತ್ಸವ_21-01-2020


ಧಾರವಾಡ  ಜ. 21: ಶರಣರ ಹಾಗೂ ಮಹಾನುಭಾವರ ಜೀವನ ಚರಿತ್ರೆ ಮತ್ತು ಅವರ ಜೀವನದ ಸಾಧನೆಯ ಬಗ್ಗೆ ತಿಳಿದುಕೊಂಡು ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕೆಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಅವರು ಇಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಶರಣ ಪರಂಪರೆಯಲ್ಲಿ ಅಂಬಿಗರ ಚೌಡಯ್ಯ ಶರಣ ನಿಷ್ಠ ಭಕ್ತನಾಗಿ ಮತ್ತು ನಿತ್ಯಕಾಯಕ ಯೋಗಿಯಾಗಿ ಗುರುತಿಸಿಕೊಂಡಿದ್ದಾರೆ. ಬಸವಣ್ಣನವರ ಅತ್ಯಂತ ಆಪ್ತ ಶರಣರಲ್ಲಿ ಅಂಬಿಗರ ಚೌಡಯ್ಯನವರು ಪ್ರಮುಖರಾಗಿದ್ದು, ಅವರು ವಚನಗಳ ಮೂಲಕ ಸಮಾಜದ ಅನಿಷ್ಟಗಳನ್ನು ಮೂದಲಿಸಿ, ಬದಲಾವಣೆಗೆ ಮಾರ್ಗ ತೋರಿದ್ದಾರೆ ಎಂದರು.

ಅಂಬಿಗರ ಸಮುದಾಯವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಸಮಾಜದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ಅವರ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕರು ಹೇಳಿದರು.

ಜಯಮೃತ್ಯುಂಜಯ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅರವಿಂದ ಏಗನಗೌಡರ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ಶ್ರೀ ಅಂಬಿಗರ ಚೌಡಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು.



ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ  ಮುನ್ನಡೆಸಲು ಸಾಧ್ಯ

ಮಾಧ್ಯಮ ಮುನ್ನೆಡೆಯಲ್ಲು ನಿವು 100,500,1000,2500,5000,10000,50000,1 ಲಕ್ಷ.  ದೇಣಿಗೆ ಸಹಾಯ ನೀಡಬಹುದು
ಗೂಗಲ್ ಪೇ ಪೋನ ಪೇ ಮೂಲಕ ಕೂಡ ನೀಡಬಹುದು 9008329745
ಅಂಬಿಗ ನ್ಯೂಸ್ ಟಿವಿ ಗೆ ಸಹಾಯ ನೀಡಲು ಈ ಕೇಳಗಿನ ಕೋಡ ಬಳಸಿ ಆನ್ ಲೈನ್ ದೇಣಿಗೆ ನೀಡಬಹುದು

Amaresh kamanakeri
A/c 62053220183 IFC-SBIN0020354 ಪೋನ ನಂ 9008329745

Be the first to comment

Leave a Reply

Your email address will not be published.


*