ರಾಜ್ಯ ಸುದ್ದಿಗಳು
ಬೆಂಗಳೂರು ಜೂನ್ 17:
ದ ಸೋಕ್ ಮಾರ್ಕೆಟ್’ ಶೀರ್ಷಿಕೆಯಡಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಹತ್ತು ದಿನಗಳ ಕಾಲ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಮೇಳವನ್ನು ನಟಿಯರಾದ ಭೂಮಿ ಶೆಟ್ಟಿ ಮತ್ತು ವಿದ್ಯಾಶ್ರೀ ಶುಕ್ರವಾರ ಚಾಲನೆ ನೀಡಿದರು.
ಚಿತ್ರಕಲಾ ಪರಿಷತ್‍ನಲ್ಲಿ ಶುಕ್ರವಾರ ಆರಂಭವಾಗಿರುವ ಸೋಕ್ ಚಿತ್ರಕಲಾ ಮೇಳವು 10 ದಿನಗಳ ಕಾಲ ನಡೆಯಲಿದ್ದು, ಇಲ್ಲಿ ನಾನಾ ತರಹದ ಕಲೆ, ಶಿಲ್ಪಕಲಾ ಕೃತಿಗಳು, ಆಭರಣಗಳು ಹೀಗೆ ಹಬ್ಬದ ವಾತಾವರಣವೇ ಇದೆ. ಮನೆಗೆ ಬೇಕಾದ ಎಲ್ಲಾ ಬಗೆಯ ಅಲಂಕಾರಿಕ ವಸ್ತುಗಳು ಸಿಗಲಿವೆ. ಮೇಳಕ್ಕೆ ಬಂದು ವೀಕ್ಷಿಸುವುದರ ಜತೆಗೆ ಖರೀದಿಸಿ, ಕಲಾವಿದರನ್ನು ಪ್ರೋತ್ಸಾಹಿಸಿರಿ.’
-ಭೂಮಿ ಶೆಟ್ಟಿ, ನಟಿ
ನಟಿ ವಿದ್ಯಾಶ್ರೀ, ದಿ ಸೋಕ್ ಮಾರ್ಕೆಟ್’ನಲ್ಲಿ ನಾನಾ ಬಗೆಯ ವಸ್ತುಗಳು ಲಭ್ಯವಿವೆ. ಬಗೆ ಬಗೆಯ ದೇವರ ಮೂರ್ತಿಗಳಿವೆ. ನಾನಾ ವಿನ್ಯಾಸದ ಸೀರೆಗಳಿವೆ. ರಾಜ್ಯದ ನಾನಾ ಭಾಗಗಳ ಕಲಾವಿದರು ತಮ್ಮ ಕೈಚಳಕವನ್ನು ಪ್ರದರ್ಶಿಸಿ ಸುಂದರ ವಸ್ತುಗಳನ್ನು ಸಿದ್ಧಪಡಿಸಿ ತಂದಿದ್ದಾರೆ. ಗ್ರಾಹಕರು ಭೇಟಿ ಕೊಟ್ಟು ತಮ್ಮ ಇಷ್ಟದ ವಸ್ತುಗಳನ್ನು ಖರೀದಿಸಿ’ ಎಂದರು.
80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
ಸ್ಥಳ:
ಕರ್ನಾಟಕ ಚಿತ್ರಕಲಾ ಪರಿಷತ್ ಆವರಣ, ಕುಮಾರಕೃಪಾ ರಸ್ತೆ. ಸಮಯ: ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7ರವರೆಗೆ ನಡೆಯಲಿದೆ. ಪ್ರವೇಶ ಉಚಿತವಾಗಿದೆ
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ. ಈ ಮೇಳ ಜೂನ್ 26 ರ ವರೆಗೆ ನಡೆಯಲಿದೆ.
Be the first to comment