ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮದ ಬಾಗಲಕೋಟೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ಗಳವರೆಗೆ ಸಾಲ ಸೌಲಭ್ಯವನ್ನು ಶೇಕಡಾ 4ರ ಬಡ್ಡಿದರದಲ್ಲಿ ಒದಗಿಸಲಾಗುತ್ತದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿ ಮತ್ತು ಉಪಜಾತಿಗೆ ಸೇರಿದವರಾಗಿರಬೇಕು.ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬಂಧಪಟ್ಟ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಕಛೇರಿಯ ಅವಧಿಯಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗಿದ್ದು,ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ.
ಅರ್ಹ ಅಲೆಮಾರಿ ಮತ್ತು ಅರೆ-ಅಲೆಮಾರಿ ಜನಾಂಗಕ್ಕೆ ಸೇರಿದ ಅರ್ಜಿದಾರರು https://suvidha.karnataka.gov.in ವೆಬ್‍ಸೈಟ್‍ನ ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ 2022ರ ಆಗಸ್ಟ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ನಿಗಮದ https://kaad.karnataka.gov.in ವೆಬ್‍ಸೈಟ್‍ನ್ನು, ನಿಗಮದ ಸಹಾಯವಾಣಿ ಸಂಖ್ಯೆ 080-22374832, ಮೊಬೈಲ್ ಸಂಖ್ಯೆ 9606066389ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
Be the first to comment