ಯಾದಗಿರಿ ಸುದ್ದಿ :: ಅಖಿಲ ಕರ್ನಾಟಕ ಹೆಳವ ಸಮಾಜ (ರಿ) ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಪ್ರಸ್ತುತ 2021 – 22 ನೇ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಅಲೆಮಾರಿ ಹೆಳವ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಇಂದು ಯಾದಗಿರಿ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಾಸ್ತರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇಂದು ನಡೆಯುವ ಕಾರ್ಯಕ್ರಮದಲ್ಲಿ ಕೋಡಿಹಳ್ಳಿ ಮಠದ ಶ್ರೀ ಬಸವ ಬೃಂಗೇಶ್ವರ ಶ್ರೀಗಳು, ದಮ್ಮನಸೂರ ಮಠದ ಶ್ರೀ ಶಂಕರಲಿಂಗ ಸ್ವಾಮೀಜಿ ಹಾಗೂ ನಾಲತವಾಡದ ಶ್ರೀ ಬಸವರಾಜ ಗುರೂಜಿಯವರು ದಿವ್ಯ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ, ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಬಿಎಚ್ ಹೆಳವರ ಕಲಬುರ್ಗಿ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ನಗರ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ್ ರವರು ವಹಿಸಿಕೊಳ್ಳಲಿದ್ದಾರೆ ಜೊತೆಗೆ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ. ಬಿ. ವೇದಮೂರ್ತಿ, ನಗರಸಭೆ ಅಧ್ಯಕ್ಷರಾದ ಸುರೇಶ್ ಅಂಬಿಗೇರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಪ್ಪ ಸಂಕೀನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ರಾಘವೇಂದ್ರ KGS ಹಾಗೂ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪ್ರಭು ದೊರೆ, ಡಿಡಿಯು ಸಂಸ್ಥೆಯ ಮುಖ್ಯಸ್ಥರಾದ ಭೀಮಣ್ಣ ಮೇಟಿ, ರಾಜ್ಯ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸೈದಪ್ಪ ಗುತ್ತೇದಾರ, ಹೆಳವ ಸಮಾಜದ ಜಿಲ್ಲಾಧ್ಯಕ್ಷರಾದ ಹನುಮಂತರಾಯ ಹಳಿಸಗರ, ಗೌರವಾಧ್ಯಕ್ಷರಾದ ಶಿವಶರಣಪ್ಪ ಕನ್ನೊಳ್ಳಿ, ಉಪಾಧ್ಯಕ್ಷರಾದ ಯಲ್ಲಪ್ಪ ಕೋರಿ, ಹಿರಿಯ ಮುಖಂಡರಾದ ಬಸವರಾಜ ಹೆಳವರ ಯಾಳಗಿ, ವಕೀಲರಾದ ಹೆಚ್. ಎನ್ . ಗೋಗಿ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ.
Be the first to comment