ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ ತಿಳಿಸಿದ್ದಾರೆ.
ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು,ಅರ್ಜಿ ಸಲ್ಲಿಸುವ ಮಕ್ಕಳ ತಂದೆ ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರರಾಗಿರಬೇಕು ಹಾಗೂ ಸದರಿ ಅರ್ಜಿ ಜೊತೆಗೆ ಸೇವಾ ದೃಢೀಕರಣ ಪ್ರಮಾಣಪತ್ರದಲ್ಲಿ ತಾಲ್ಲೂಕು ಅಧ್ಯಕ್ಷರ ಸಹಿ ಇರಬೇಕು,ದೃಢೀಕರಣ ಇಲ್ಲದ ಆನ್‌ಲೈನ್ ಮೂಲಕ ಸಲ್ಲಿಸಲ್ಪಡುವ ಅರ್ಜಿ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಆನ್‍ಲೈನ್ ಅರ್ಜಿ ಸಲ್ಲಿಸಲು https://bit.ly/ksgeaprathibapuraskara2022 ಸಂಪರ್ಕಿಸಲು ಕೋರಿದ್ದಾರೆ.ಅರ್ಜಿ ಸಲ್ಲಿಸಲು ಜುಲೈ 31 ರವರೆಗೆ ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಖಜಾಂಚಿ ಎಂ ಎಚ್ ಗೌಡರ,ಕಾರ್ಯದರ್ಶಿ ಗುಂಡಪ್ಪ ಕುರಿ, ಗೌರವಾಧ್ಯಕ್ಷ ಎಸ್ ಎನ್ ಗಡೇದ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Be the first to comment