ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಇಲಕಲ್ಲ ತಾಲೂಕಿನ ಕೆಲೂರ ಗ್ರಾಮಕ್ಕೆ ಶಾಸಕ ದೊಡ್ಡನಗೌಡ ಪಾಟೀಲ್ ಭೇಟಿ ನೀಡಿ ಜೆಜೆಎಂ ಕಾಮಗಾರಿಗಳಿಗೆ,ರಸ್ತೆ ಕಾಮಗಾರಿ ಹಾಗೂ ಸಿಸಿ ರಸ್ತೆ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು ಕೇಂದ್ರ ಸರಕಾರದ ಜಲ ಜೀವನ ಮಿಷನ್ ಯೋಜನೆಯಡಿ ರಾಜ್ಯ ಸರಕಾರ ‘ಮನೆ ಮನೆಗೆ ಗಂಗೆ’ ಯೋಜನೆ ರೂಪಿಸಿದ್ದು, ಮನೆಗಳಿಗೆ ಹೊಸ ನಳಗಳ ಸಂಪರ್ಕ ಕಲ್ಪಿಸಲು ಯೋಜನೆ ರೂಪುಗೊಂಡಿದೆ.ಕೆಲೂರ ಗ್ರಾಮದ 1011 ಮನೆಗಳಿಗೆ 1.44 ಲಕ್ಷ ವೆಚ್ಚದಲ್ಲಿ ಈ ಯೋಜನೆ ಸಿದ್ದವಾಗಿದೆ ಎಂದರು.
ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲ ಜೀವನ ಮಿಷನ್ ಅಡಿ-2024ರ ವೇಳೆಗೆ ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ನಳದ ಮೂಲಕ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ‘ಹರ್ ಘರ್ ನಲ್ ಸೇ ಜಲ್’ ಎಂಬ ಮಹಾತ್ವಾಂಕ್ಷಿ ಯೋಜನೆಯನ್ನು ಜಾರಿಗೊಲಿಸಿದ್ದು, ರಾಜ್ಯ ಸರ್ಕಾರವು 2023ರೊಳಗಾಗಿ ರಾಜ್ಯದ ಎಲ್ಲ ಗ್ರಾಮೀಣ ಕುಟುಂಬಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಲು ‘ಮನೆ ಮನೆಗೆ ಗಂಗೆ’ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ನನ್ನ ಮತಕ್ಷೇತ್ರದ ಎಲ್ಲ ಗ್ರಾಮೀಣ ಪ್ರದೇಶಗಳ ಪ್ರತಿ ಮನೆ ಮನೆಗೂ ನಳದ ವ್ಯವಸ್ಥೆ ಕಲ್ಪಿಸಿ ಅದಕ್ಕೆ ಮೀಟರ್ ಅಳವಡಿಸಿ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಒದಗಿಸುತ್ತಿರುವುದು ವಿಶೇಷವಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲಿದ್ದು ಕೆಲ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಕೆಲೂರ ದಿಂದ ಸಿದ್ದನಕೊಳ್ಳದವರೆಗೆ ಒಳ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರ,ರಾಜಕೀಯ ಮುಖಂಡರಾದ ಅಜ್ಜಪ್ಪ ನಾಡಗೌಡರ,ನಿಂಗಪ್ಪ ಬನ್ನಿ,ಮಂಜು ಗೌಡರ,ಷಣ್ಮುಖಪ್ಪ ರೊಟ್ಟಿ,ಸಂಗಣ್ಣ ನಾಡಗೌಡರ,ಗ್ರಾಮ ಪಂಚಾಯತ ಸದಸ್ಯರಾದ ರಮೇಶ ಕೊಪ್ಪದ,ಉಮೇಶ ಹೂಗಾರ,ಹನಮಂತ ವಡ್ಡರ,ಗ್ರಾಮದ ಹಿರಿಯರಾದ ನಿಂಗಪ್ಪ ಗಿರಿಸಾಗರ,ಶಂಕ್ರಪ್ಪ ಮಾದನಶೆಟ್ಟಿ,ಬಸಲಿಂಗಪ್ಪ ಕೋಟಿ,ಹುಲ್ಲಪ್ಪ ವಡ್ಡರ,ಹನಮಂತ ಐಹೊಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.
Be the first to comment