ರಾಜ್ಯ ಸುದ್ದಿಗಳು
ಬೆಂಗಳೂರು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರದಿಂದ ನೀಡಿರುವ ಜಾಹೀರಾತಿನಲ್ಲಿ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ರದಲ್ಲಿ ‘ಈ ದೇಶದ ಸ್ವತಂತ್ರಕ್ಕಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಶ್ರಮವಿದೆ. ಜವಾಹರಲಾಲ್ ನೆಹರು ಅವರಿಗೆ ಅಪಮಾನ ಮಾಡುವ ಮೂಲಕ ಇತಿಹಾಸವನ್ನು ತಿರುಚುವ ವಿಫಲ ಯತ್ನ ಮಾಡಿದ್ದೀರಿ. ಉಪ್ಪಿನ ಸತ್ಯಾಗ್ರಹ, ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಸೇರಿದಂತೆ ಅನೇಕ ಚಳವಳಿಗಳಲ್ಲಿ ನೆಹರು ಭಾಗವಹಿಸಿದ್ದರು.
ಸ್ವಾತಂತ್ರ್ಯಾನಂತರ ನವ ಭಾರತ ನಿರ್ಮಾಣದಲ್ಲಿ ನೆಹರು ಅವರ ಶ್ರಮ ಬಹಳಷ್ಟು ಇದೆ. ರಾಜಕೀಯಕ್ಕಾಗಿ ಇಷ್ಟೊಂದು ಕಳಮಟ್ಟಕ್ಕೆ ನೀವು ಇಳಿಯಬಾರದಾಗಿತ್ತು. ಆಗಿರುವ ಪ್ರಮಾದಕ್ಕೆ ನೀವು ಕ್ಷಮೆ ಕೇಳಬೇಕು. ಇತಿಹಾಸದ ಸತ್ಯವನ್ನು ನೀವು ಎತ್ತಿ ಹಿಡಿಯಬೇಕೆಂದು ಒತ್ತಾಯಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ಹೊರಹಾಕಿದ್ದಾರೆ.
Be the first to comment