ರಾಜ್ಯ ಸುದ್ದಿಗಳು
ಬೆಂಗಳೂರು
ರಾಜ್ಯ ಸರ್ಕಾರ ಇಂದು ನೀಡಿರುವ ಜಾಹೀರಾತಿನಲ್ಲಿ ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಹೆಸರು ಕೈಬಿಟ್ಟಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ಧಾರೆ.ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿದ್ದು, ‘ನೆಹರು ಅವರನ್ನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಸೇರಿಸಿಲ್ಲ, ಕುರ್ಚಿಗಾಗಿ ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು ಅನ್ನೋದು ಇದರಿಂದ ಸಾಬೀತಾಗಿದೆ. ಮುಖ್ಯಮಂತ್ರಿಗಳೇ, ಕುರ್ಚಿ ಉಳಿಸಿಕೊಳ್ಳಲು ಈ ಪರಿಯ ಗುಲಾಮಗಿರಿಯೇ..? ನೆಹರೂ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಟು ವಾಗ್ದಾಳಿ ನಡೆಸಿದ್ಧಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?
1/7 pic.twitter.com/9pfTJgpOJK
— Siddaramaiah (@siddaramaiah) August 14, 2022
ಸನ್ಮಾನ್ಯ @BSBommai ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.
2/7 pic.twitter.com/W8zYXyM9b4
— Siddaramaiah (@siddaramaiah) August 14, 2022
Be the first to comment