ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ:ಮೂರು ದಿನ ವಿಜೃಂಭಣೆಯಿಂದ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸಭೆಯಲ್ಲಿ ನಿರ್ಧಾರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಹಾಗೂ ಧೀಮಂತ ನಾಯಕ ಡಿ.ದೇವರಾಜ ಅರಸು ಅವರ 107 ಜನ್ಮ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಡಿ.ದೇವರಾಜ ಅರಸು ಜನ್ಮದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಸು ಅವರ ದೂರದೃಷ್ಟಿ ಮತ್ತು ಹಿಂದುಳಿದ ವರ್ಗಗಳ ಏಳಿಗೆಗೆ ಅವರಿಗಿದ್ದ ಬದ್ಧತೆ ಶ್ಲಾಘನೀಯ. ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾ ಮಟ್ಟದಲ್ಲಿ 3 ದಿನ ವಿವಿಧ ಇಲಾಖೆಗಳ ಆಶ್ರಯದಲ್ಲಿ ವಸ್ತು ಪ್ರದರ್ಶನ ಮಳಿಗೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅ.20ರಂದು ಜಿಲ್ಲಾಡಳಿತ ಭವನದಿಂದ ಅಂಬೇಡ್ಕರ್ ಭವನದವರೆಗೂ ಮೆರವಣಿಗೆ, ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ, ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆ-21 ರಂದು ಜಿಲ್ಲಾ ಮಟ್ಟದಲ್ಲಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುವುದು, ಆ.22 ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವ ತಿಳಿವಳಿಕೆ ಹಾಗೂ ವನ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಎನ್‌.ವೈ. ಬಸರಿಗಿಡದ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ರಮೇಶ ಚವ್ಹಾಣ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಇತರರು ಇದ್ದರು.

Be the first to comment

Leave a Reply

Your email address will not be published.


*