ಕೆಲೂರ:ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮ
ಕೆಲೂರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಗ್ರಾಮೀಣ ಜನರ ಸಮಸ್ಯೆಗಳಿಗೆ ತಾಲೂಕಾ ಆಡಳಿತದಿಂದ ಸ್ಪಂದನೆ.

ಬಾಗಲಕೋಟೆ:ಸರಕಾರದ ನಿರ್ದೇಶನದಂತೆ
ದಿನಾಂಕ:20-08-2022 ರಂದು ಮೂರನೆ ಶನಿವಾರ ಕೋವಿಡ್-19 ಮಾರ್ಗಸೂಚಿ ಪ್ರಕಾರ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುತ್ತದೆ.

”ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಫವತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಸಂಬಂಧ ಡಿಸಿಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ,”ಕಾರಣ ಸಾರ್ವಜನಿಕರು ತಮ್ಮ ಅಹವಾಲುಗಳ ಮನವಿಗಳನ್ನು ಸಲ್ಲಿಸಲು ಇಲಕಲ್ಲ ತಾಲೂಕಿನ ತಹಶಿಲ್ದಾರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Be the first to comment

Leave a Reply

Your email address will not be published.


*