ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಪ್ರಗತಿಯ ನಾಯಕ ಎಂದು ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಶನಿವಾರ ತಾಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ
ಸಹಯೋಗದಲ್ಲಿ ನಡೆದ ಸಾಮಾಜಿಕ ನ್ಯಾಯದ
ಹರಿಕಾರ ಡಿ.ದೇವರಾಜ್ ಜಯಂತ್ಯುತ್ಸವ ಅರಸು ಅವರ 107ನೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇವರಾಜ ಅರಸು ಅವರು ಜಮೀನ್ದಾರಿ ಪದ್ಧತಿಯನ್ನು ನಿಯಂತ್ರಿಸಿ ಭೂಸುಧಾರಣೆ ಕಾಯ್ದೆ ಜಾರಿಗೆತರುವ ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಭೂಮಿ ಹಂಚಿಕೆ ಮಾಡಿ ಹಲವಾರು ಕುಟುಂಬಗಳ ಬಾಳಿಗೆ ಬೆಳಕಾದರು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜಿ.ಎನ್.ಖ್ಯಾಡಿ ಮಾತನಾಡಿ, ದೇವರಾಜ ಅರಸರು ರಾಜ್ಯದಲ್ಲಿನ ಹಲವಾರು ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟು, ಶೋಷಿತ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸಿದರು ಎಮದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಶಾಂತ ತುಂಬಗಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿ.ಗಿರಿತಿಮ್ಮಣ್ಣವರ, ಸಿ.ಪಿ.ಐ ಸುರೇಶ ಬೆಂಡೆಗುಂಬಳ, ಸಂಗಮೇಶ ಗಡೇದ ಇದ್ದರು.
Be the first to comment