ಒಬ್ಬ ಶಿಕ್ಷಕ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪ:ಗುರು ಮಹಾಂತ ಶ್ರೀ…!

ವರದಿ: ಶರಣಪ್ಪ ಹೇಳವರ, ಬಾಗಲಕೋಟ

ಜಿಲ್ಲಾ ಸುದ್ದಿಗಳು 

ಹುನಗುಂದ:

CHETAN KENDULI

ಸಮಾಜದ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ದೊಡ್ಡದು ಎಂದು ಇಳಕಲ್ಲದ ಗುರು ಮಹಾಂತ ಶ್ರೀ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶಿಕ್ಷಕ ವೃತ್ತಿ ಜವಾಬ್ದಾರಿ ಮತ್ತು ಗೌರವಯುತ ಸ್ಥಾನ ಹೊಂದಿದೆ. ಒಬ್ಬ ಶಿಕ್ಷಕ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪ, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಶಿಕ್ಷಕರು ಸಾಕ್ಷಾತ್ ದೇವರು ಎಂದರು.

ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ವೃತ್ತಿಗಳಲ್ಲಿ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಭವಿಷ್ಯದ ಭಾರತದಲ್ಲಿ ಸತ್ಪ್ರಜೆಗಳನ್ನು ಬೆಳೆಸುವ ಕಾರ್ಯ ನಿಮ್ಮ ಮೇಲಿದೆ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಅಮೂಲ್ಯಾಗ್ರ ಬದಲಾವಣೆ ತರಲು ಕಾರ್ಯೋನ್ಮಖವಾಗಿದ್ದು, ದೇಶಾದ್ಯಂತ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದರು.

 

ತಾಲ್ಲೂಕಿನ ಶಾಲೆಗಳ ಕಟ್ಟಡಗಳ ಕೊರೆತಯನ್ನು ನೀಗಿಸುವ – ಉದ್ದೇಶದಿಂದ ಹೊಸದಾಗಿ 30 ಕಟ್ಟಡಗಳು ಮಂಜೂರಾಗಿವೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಪಣೆ ಮಾಡಿದರು. ಸೇವೆಯಿಂದ ನಿವೃತ್ತಿ ಹೊಂದಿದ ಸುಮಾರು 79 ಜನ ಶಿಕ್ಷಕರನ್ನು ಸನ್ಮಾನಿಸಲಾಯಿತು. 

ತಹಶೀಲ್ದಾರ್ ಬಸಲಿಂಗಪ್ಪ ನೈಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಕೊಂಕಲ್, ಕ್ಷೇತ್ರ ಸಮನ್ವಯಾಧಿಕಾರಿ ಶರಣಪ್ಪ ಕಾರಿಕಲ್‌,ಇಲಕಲ್ಲ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸಿದ್ಧಪ್ಪ ಪಟ್ಟಿಹಾಳ,ಹುನಗುಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಎ.ಎಚ್.ಗೌಡರ, ಸಂಗಣ್ಣ ಹಂಡಿ, ಸಿದ್ದು ಶೀಲವಂತ ಹಾಗೂ ವಿವಿಧ ಶಿಕ್ಷಕ ಸಂಘಟನೆಗಳ ಅಧ್ಯಕ್ಷರು ಇದ್ದರು.

Be the first to comment

Leave a Reply

Your email address will not be published.


*