ಜಿಲ್ಲಾ ಸುದ್ದಿಗಳು
ಹುನಗುಂದ:
2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿ/ವಿದ್ಯಾರ್ಥಿನ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು 22-09-2022ರವರಗೆ ವಿಸ್ತರಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 1)ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಹುನಗುಂದ 2) ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಇಲಕಲ್ 3) ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಹುನಗುಂದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ಪಂ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು 2022-23ನೇ ಸಾಲಿಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಮಿತಿ ಪ್ರವರ್ಗ-1 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ- ರೂ.1.00 ಲಕ್ಷ ಒಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಮೊ.ಸಂಖ್ಯೆ:8497850515 ಇವರನ್ನು ಸಂಪರ್ಕಿಸಲು ತಿಳಿಸಿದೆ.
Be the first to comment