ಆದರ್ಶ ವಿದ್ಯಾಲಯ RMSA ವಜ್ಜಲ ಶಾಲೆಯ ಬಾಲಕಿಯರು ವಿಭಾಗ ಮಟ್ಟಕ್ಕೆ ಆಯ್ಕೆ!

ಸುರಪುರ ಅ.02: ವಜ್ಜಲ್ ಗ್ರಾಮದ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿಯರು ಶಟಲ್ ಬ್ಯಾಡ್ಮಿಂಟನ್ ನಲ್ಲಿ ಜಿಲ್ಲಾ ಮಟ್ಟದಲ್ಲಿ ಗೆಲುವನ್ನು ಸಾಧಿಸುವುದರ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ 2022ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.
ಈ ಕ್ರೀಡಾಕೂಟದಲ್ಲಿ ಸುಮಾರು ಮೂರು ತಾಲೂಕಿನ ವಿದ್ಯಾರ್ಥಿನಿಯರು ಶಟಲ್ ಬ್ಯಾಡ್ಮಿಂಟನ್ ಪಂದ್ಯಗಳಲ್ಲಿ ಭಾಗವಹಿಸಿದ್ದರು,ದೈಹಿಕ ಶಿಕ್ಷಕರಾದ ಶ್ರೀವಿಠ್ಠಲ್ ಚೌವಾಣ ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ವಜ್ಜಲ್ ದ ಆದರ್ಶ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿನಿಯರು ಶಟಲ್ ಬ್ಯಾಡ್ಮಿಂಟನ್  ತಂಡದ ನಾಯಕಿ ನಸ್ರಿನ ನೇತೃತ್ವದಲ್ಲಿ ಮೇಗಾ,ಸನಾ,ತೇಜಸ್ವಿನಿ,ಸುನಂದ,ಸುನೀತಾ, ಇವರು ಫೈನಲ್ ಪಂದ್ಯದಲ್ಲಿ ಗೆಲುವನ್ನು ಸಾಧಿಸುವುದರ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.
ನಮ್ಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಗೆಲುವನ್ನು ಸಾಧಿಸಿ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುವುದು ನಮ್ಮ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇನ್ಮುಂದೆ ವಿಭಾಗ ಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಗೆಲುವನ್ನು ಸಾಧಿಸಿ ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಬೇಕು ಎಂಬುದು ನಮ್ಮೆಲ್ಲರ ಆಸೆ ಎಂದು ಉಪ ಪ್ರಾಂಶುಪಾಲರಾದ ಎಸ ಎಸ ಬಾಕ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮತ್ತು  ಸಿಬ್ಬಂದಿ ಇದ್ದರು

Be the first to comment

Leave a Reply

Your email address will not be published.


*