ಹುಣಸಗಿ: ಸರಕಾರವು ಜಾರಿಗೆ ತಂದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ವಿನೂತನ ಯೋಜನೆಯನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಅಕ್ಟೋಬರ್ – 15 ರಂದು ತಾಲೂಕಿನ ನಾರಾಯಣಪೂರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಪ್ರಯುಕ್ತ ನಾರಾಯಣಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ಈ ಗ್ರಾಮ ವಾಸ್ತವ್ಯದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಕುಂದು ಕೊರತೆಗಳನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಹಂಚಿಕೊಳ್ಳಬಹುದಾಗಿದೆ ಎಂದು ಹುಣಸಗಿ ತಹಶೀಲ್ದಾರರ ಜಗದೀಶ ಚೌರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment