ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಅರೇನಾ ಆವರಣದಲ್ಲಿ ಮೋದಿ ಸಭೆ .ಸ್ಥಳ ವೀಕ್ಷಣೆ ಮಾಡಿದ ಮೂವರು ಸಚಿವರು

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿಗಳು 

 

ಬೆಂಗಳೂರು

CHETAN KENDULI

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಯ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಪ್ರಾಧಿಕಾರದ ಸದಸ್ಯ ಮತ್ತು ಕಂದಾಯ ಸಚಿವ ಆರ್ ಅಶೋಕ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರು ಶನಿವಾರ ನಡೆಸಿದರು.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಮೂವರೂ ನಾಯಕರು, ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸುತ್ತಿರುವ ಜಾಗವನ್ನು ಕೂಡ ಕೂಲಂಕಷವಾಗಿ ವೀಕ್ಷಿಸಿದರು.

ಮೋದಿಯವರ ಸಾರ್ವಜನಿಕ ಸಭೆಯನ್ನು ಎಲ್ಲಿ ನಡೆಸಿದರೆ ಸೂಕ್ತವೆನ್ನುವ ಉದ್ದೇಶದಿಂದ ಪ್ರತಿಮೆಯ ಹತ್ತಿರದಲ್ಲೇ ಇರುವ 40 ಎಕರೆ ವಿಸ್ತೀರ್ಣ ದ ‘ಅರೇನಾ’ ಪರಿಸರ ಮತ್ತು ಏರ್ ಪೋರ್ಟ್ ರೈಲು ನಿಲ್ದಾಣದ ಬಳಿ ಇರುವ ಸ್ಥಳಗಳೆರಡನ್ನೂ ಇವರು ಅವಲೋಕಿಸಿದರು. ರೈಲು ನಿಲ್ದಾಣ ಇರುವ ಪ್ರದೇಶವು ಪ್ರತಿಮೆಗೆ ತುಂಬಾ ದೂರದಲ್ಲಿ ಇದ್ದು ಅಲ್ಲಿಗೆ ಪ್ರತಿಮೆ ಕೂಡ ಕಾಣುವುದಿಲ್ಲ. ಆದರೆ ಅರೇನಾ ಜಾಗಕ್ಕೆ ಪ್ರತಿಮೆ ಕಾಣಿಸುತ್ತದೆ. ಹೀಗಾಗಿ ಅದೇ ಸೂಕ್ತ ಎನ್ನುವ ಅಭಿಪ್ರಾಯವನ್ನು ಸಚಿವರು ವ್ಯಕ್ತಪಡಿಸಿದರು. ಈ ಸಂಬಂಧ ಸಿಎಂ ಅವರ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವರು ನಿರ್ಧರಿಸಿದರು.

Be the first to comment

Leave a Reply

Your email address will not be published.


*