ಸಮಾಜಮುಖಿಯಾಗಿ ಬದುಕಿರಿ: ಮಹಾಬಲೇಶ್ವರ ಗಡೇದ

ವರದಿ:ಚೇತನ ಕೆಂದೂಳಿ, ಸಂಪಾದಕರು

ಜಿಲ್ಲಾ ಸುದ್ದಿಗಳು 

ಮುದ್ದೇಬಿಹಾಳ:

CHETAN KENDULI

ಓದು ಒಕ್ಕಾಲು, ಬುದ್ಧಿ ಮುಕ್ಕಾಲು ಎಂಬ ಗಾದೆ ಮಾತಿನಂತೆ ನಮ್ಮ ಕೊಠಡಿಯೊಳಗಿನ ಓದಿಗಿಂತ ಸಮಾಜದಲ್ಲಿ ಕಲಿಯಬೇಕಾದ ಪಾಠಗಳು ಬಹಳ ಇವೆ ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಹೇಳಿದರು.

ಅವರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಶಾಲಾ ಪಠ್ಯ ಚಟುವಟಿಕೆಗಳ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳದಳಲಾಗುತ್ತಿದೆ.

ಶ್ರಮದಾನದ ಮೂಲಕ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ, ಗಿಡಗಳನ್ನು ನೆಡುವ ಕಾರ್ಯ, ದೇಗುಲಗಳನ್ನು ಕಟ್ಟುವ, ಸಂರಕ್ಷಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಅರಿಯಬೇಕು ಎನ್ನುವ ಸದುದ್ದೇಶ ಇದರಲ್ಲಿದೆ. ಒಂದು ಪ್ರದೇಶದಲ್ಲಿ ಎಲ್ಲರೂ ಸೇರಿ ಸಹ ಜೀವನ ನಡೆಸುವ, ಸಹ ಭೋಜನ ನಡೆಸುವ ಮೂಲಕ ನಾವೆಲ್ಲರೂ ಒಂದು ಎಂಬ ಸಮಾನತೆಯ ಭಾವ ಬರುವಂತೆ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಕಾರ್ಯಕ್ರಮ ಆಯೋಜಿಸಸಲಾಗುತ್ತದೆ. ವಿದ್ಯಾರ್ಥಿಗಳು ಇದನ್ನು ಅರಿತುಕೊಂಡು ಇದರ ಲಾಭ ಪಡೆಯಬೇಕೆಂದು ಅವರು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಎಸ್.ಎಸ್.ಅಂಗಡಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಿಗೆ ಸಹಬಾಳ್ವೆಯ ಜೀವನ ಕಲಿಸುತ್ತದೆ. ಶ್ರಮದ ಮಹತ್ವ, ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೇ ರಚನಾತ್ಮಕ ಕೆಲಸ ಮಾಡಬಹುದು ಎಂಬುದನ್ನು ಈ ಶಿಬಿರಗಳಲ್ಲಿ ಕಲಿಯಲು ಸಾಧ್ಯ ಎಂದರು. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಸಂಯೋಜಕ ಎಸ್.ಜಿ.ಲೊಟಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬಿ.ಎ.ನಾಡಗೌಡ್ರ, ಆರ್.ಎಲ್.ಪಾಟೀಲ, ಎಸ್.ಕೆ.ಮಾಳಗೊಂಡ, ಬಿ.ಎಸ್.ಬಡಿಗೇರ, ಎಸ್.ಎಸ್.ಶಿರೂರ, ಅನ್ನಪೂರ್ಣ ಚಳಗೇರಿ ಮತ್ತಿತರರು ಇದ್ದರು.

Be the first to comment

Leave a Reply

Your email address will not be published.


*