ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ 

ಮಸ್ಕಿ, ಡಿಸೆಂಬರ್ 18 : ಪಟ್ಟಣದ ವಿವಿಧ ಕಾಲೇಜು ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ಅಂಬೇಡ್ಕರ್ ವೃತ್ತದ ಬಳಿ ಸೇರಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನೀಡುವ ಮೂಲ ಸೌಕರ್ಯಗಳ ಕಡಿತ ಗೊಳಿಸದೆ ಮುಂದುವರೆಸುವಂತೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ವಿದ್ಯಾರ್ಥಿ ವೇತನ ಬರುತ್ತಿಲ್ಲ ಇದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯದಿಂದ ವಂಚಿತವಾಗಿದ್ದು ಇದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಲ್ಲದೆ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದ ಲ್ಯಾಪ್ ಟಾಪ್ ಗಳು ಕೂಡ ಸಿಗುತ್ತಿಲ್ಲ ಮತ್ತು ಶಿಷ್ಯವೇತನ ಕೂಡ ನೀಡಿರುವುದಿಲ್ಲ. ಹಾಗೂ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಬಡ ವಿದ್ಯಾರ್ಥಿಗಳು ಇವತ್ತಿಗೂ ಈ ಶಿಷ್ಯ ವೇತನದಿಂದ ವಂಚಿತರನ್ನಾಗಿ ಮಾಡಿದ್ದು ಇದಕ್ಕೆ ನೇರವಾಗಿ ಸರ್ಕಾರ ಹೊಣೆಯಾಗಿದ್ದು ಇಷ್ಟಲ್ಲದೆ ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಶೂ ಸಾಕ್ಸ್,ನೋಟ್ ಬುಕ್ ಗಳು, ಸಮವಸ್ತ್ರಗಳು ಯಾವುದೇ ಸಮಾಜದ ಕಟ್ಟ ಕಡೆ ವಿದ್ಯಾರ್ಥಿಗಳಿಗೆ ಸಿಕ್ಕಿರುವುದಿಲ್ಲ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸರ್ಕಾರವೇ ನೀಡಬೇಕು.ಆದ್ದರಿಂದ ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಣ್ಣು ತೆರೆಸಿ ರಾಜ್ಯದ ಬಡ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಕಲ ಸರ್ಕಾರಿ ಸೌಲಭ್ಯ ದೊರಕಿಸಲು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಭದ್ರಿ ಕೊಠಾರಿ ಕಂದಾಯ ಇಲಾಖೆ ಸಿಬ್ಬಂದಿ ಗಂಗಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ ಸರಕಾರಕ್ಕೆಒತ್ತಾಯಿಸಿದ್ದಾರೆ.ಸಂದರ್ಭದಲ್ಲಿ

ಪಟ್ಟಣದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸುಮನ್ ಮೆದಿಕಿನಾಳ ಎನ್. ಎಸ್. ಯು ಐ ನ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

ಸುದ್ದಿ ಮತ್ತು ವರದಿಗಾರರಾಗಿ ಸೇರಲು ಈ ಲಿಂಕ ಬಳಸಿ https://chat.whatsapp.com/ByVUeQf2NMTBYW49897k4h

Be the first to comment

Leave a Reply

Your email address will not be published.


*