ಕೆಜಿಎಫ್: ನಗರಸಭೆಯ ಮುಂಭಾಗದಲ್ಲಿ ಮಡಿವಾಳ ಮಾಚಿದೇವರ ಜಯಂಥೋತ್ಸವದ ಪ್ರಯುಕ್ತ ಸಮಾಜ ಸೇವಕ ಮೋಹನ್ ಕೃಷ್ಣ ಮತ್ತು ಮುಖಂಡರು ಪಲ್ಲಕಿಗಳಿಗೆ ಚಾಲನೆ ನೀಡಿ ಸಮುದಾಯದ ಜನರಿಗೆ ಶುಭಾಶಯಗಳು ತಿಳಿಸಿದರು.
ಸಮಾಜ ಸೇವಕ ಮೋಹನ್ ಕೃಷ್ಣ ಮಾತನಾಡಿ 12 ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು ಶರಣರ ಅಗ್ರ ಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ನಗರ ಘಟಕ ಅಧ್ಯಕ್ಷ ಕಮಲನಾಥ್,ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರವಿರೆಡ್ಡಿ,ಮುಖಂಡರಾದ ಕೃಷ್ಣಪ್ಪ,ಗಂಗಿರೆಡ್ಡಿ, ಶ್ರೀನಾಥ್,ಶ್ರೀನಿವಾಸ್, ಮತ್ತು ಮಡಿವಾಳ ಸಮುದಾಯದ ಮುಖಂಡರು ಇದ್ದರು.
Be the first to comment