ದೆಹಲಿಯಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ


      ದೇಶದ ಸುದ್ದಿಗಳು


ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಬೆಂಬಲಿಸಿ ದೆಹಲಿಯ ಮೌಜ್ ಪುರ್ ಪ್ರದೇಶದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ದೆಹಲಿಯ ಜಫರಾಬಾದ್ ಬಳಿ ಸಿಎಎ ವಿರೋಧಿಸಿ ಸಾಕಷ್ಟು ಸಂಖ್ಯೆಯಲ್ಲಿ ಧರಣಿ ನಡೆಸುತ್ತಿದ್ದರು. ಇನ್ನು ಜಫರಾಬಾದ್ ಬಳಿಯೇ ಮೌಜ್ ಪುರ ಇರುವುದರಿಂದ ಏಕಕಾಲಕ್ಕೆ ಎರಡು ಗುಂಪುಗಳು ಒಂದೆಡೆ ಸೇರಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿತ ಮತ್ತು ಸಿಎಎ ವಿರೋಧಿಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲಿಗೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿ ಇದ್ದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಆದರೆ ಆಶ್ರುವಾಯು ಪ್ರಯೋಗಿಸಿ ಸದ್ಯಕ್ಕೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇನ್ನು ದೆಹಲಿಯ ಮೆಟ್ರೋ ಸ್ಟೇಷನ್ ಗಳನ್ನು ಬಂದ್ ಮಾಡಿದ್ದು ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸುತ್ತಿದ್ದಾರೆ.

Be the first to comment

Leave a Reply

Your email address will not be published.


*