ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ:ದರ್ಶನಾಪುರ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಇಂದಿನ ಸರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಪರಿಣಾಮಕಾರಿ ಶಿಕ್ಷಣದ ಅಗತ್ಯವಿದ್ದು, ಆ ನಿಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸಬೇಕು ಎಂದು ಮಾಜಿ ಮಂತ್ರಿಗಳು ಹಾಲಿ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಲಕ್ಷ್ಮೀನಗರದ ಪುರ್ಲೆ ಅಂಗ್ಲ ಮಾಧ್ಯಮ, ಶಾಲೆಯ 8ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗವು ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಹಣೆಪಟ್ಟಿಯಿಂದ ಹೊರಬರಬೇಕಿದೆ. ಆ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಗಮನ ಹರಿಸಬೇಕು. ಅಲ್ಲದೆ ಸಂಸ್ಥೆಗಳು ಸಮರ್ಪಕ ಸೌಲಭ್ಯ ಒದಗಿಸಬೇಕು. ಶಿಕ್ಷಣ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣನಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡಬಲ್ಲದು.ಪ್ರತಿನಿತ್ಯ ಬದಲಾಗುವ ಈ ಬದುಕಿನಲ್ಲಿ ಶಿಕ್ಷಣ ಪ್ರಮುಖ ಪಾತ್ರ ನಿರ್ವಹಿಸುತ್ತದೆ.

ಈಗಿನಿಂದಲೇ ಮಕ್ಕಳಿಗೆ ಸಾಧಿ ಸುವ ಛಲವನ್ನು ರೂಢಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಅಂದಾಗ ಮಾತ್ರ ತಮ್ಮ ಗುರಿ ಮುಟ್ಟಲು ಸಾಧ್ಯಎಂದು ಹೇಳಿದರು. ಕರ್ನಾಟಕ ರಾಜ್ಯ ಪಿಯು ಉಪನ್ಯಾಸಕರ ಸಂಘದ ಸ್ಥಾಪಕ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ಯೊಂದು ಮಗುವಿನಲ್ಲಿ ವಿವಿಧ ರೀತಿಯ ಕಲೆ, ಪ್ರತಿಭೆ ಇರುತ್ತದೆ. ಅದನ್ನು ಸೂಕ್ಷ್ಮವಾಗಿ ಗಮನಿಸಬೇಕಾದದು, ಶಿಕ್ಷಕರು ಮತ್ತು ಪಾಲಕರ ಆದ್ಯ ಕರ್ತವ್ಯ ವಾಗಿದೆ. ಆಯಾ ಮಕ್ಕಳಲ್ಲಿರುವ ಪ್ರತಿಭೆಗೆ ತಕ್ಕಸೂಕ್ತ ವೇದಿಕೆ ಮತ್ತು ಮಾರ್ಗದರ್ಶನ ನೀಡಿದ್ದಲ್ಲಿ ಮಗು ಸುಲಭವಾಗಿ ಸಾಧನೆ ಮಾಡಲು ಸಾಧ್ಯವಿದೆ ಎಂದರು. ಈ ಸಂದರ್ಭದಲ್ಲಿ ಮುಖ್ಯ ಆತಿಥಿಗಳಾಗಿ ಆಗಮಿಸಿದ್ದ ಕಾಂಗ್ರೆಸ್ ಮುಖಂಡರಾದ ಶಿರವಾಳ ಚ೦ದ್ರಶೇಖರ ಆಲೇರಿ, ಸಿ.ಆರ.ಪಿ ಪ್ರಕಾಶ ಮತ್ತು ಸಂಸ್ಥೆಯ ಅಧ್ಯಕ್ಷರಾದ ಪ್ರದೀಪ ಪುರ್ತಿ ಸೇರಿದಂತೆ ಶಾಲಾ ಶಿಕ್ಷಕರು ಸಿಬ್ಬಂದಿ ಹಾಗೂ ಪಾಲಕರು ಇದ್ದರು.

ಸಂಗೀತ ಶಿಕ್ಷಕರಾದ ಬೂದಯ್ಯ ಹಿರೇಮಠ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಸಾಧನಾ ಸ್ವಾಗತಿಸಿದರು,ಮಹಮ್ಮದ್‌ ಆಜಾಸ್ ನಿರೂಪಿಸಿದರು. ಸಿದ್ದಣ್ಣ ಪಾಟೀಲ್‌ ವಂದಿಸಿದರು. ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

 

Be the first to comment

Leave a Reply

Your email address will not be published.


*