ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸುಳ್ಳು ಕಾರ್ಡ್  ಕಲ್ಯಾಣ ಕರ್ನಾಟಕದಲ್ಲಿ ಕಮಲ ಅರಳುವುದು ಗ್ಯಾರಂಟಿ. ತೇಜಸ್ವಿ ಸೂರ್ಯ 

ಜೇವರಗಿ:  ಪಟ್ಟಣದ ಶಹಪುರ್ ರಸ್ತೆಯಲ್ಲಿರುವ ದೇವರಮನಿ ಲೇಔಟ್ ನಲ್ಲಿ ಗುರುವಾರ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಆಯೋಜಿಸಲಾದ ಕಲಬುರಗಿ ಬಿಜೆಪಿ ಯುವ ಮೋರ್ಚಾ ಸಮಾವೇಶ ಉದ್ಘಾಟಿಸಿ ಸಂಸದ ತೇಜಸ್ವಿಸೂರ್ಯ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆ ಯಜಮಾನಿಗೆ ನಿರುದ್ಯೋಗ ಯುವಕರಿಗೆ ಪ್ರೋತ್ಸಾಹ ಧನ ನೀಡುವದಾಗಿ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋದೇ ಗ್ಯಾರಂಟಿ ಇಲ್ಲ ಇನ್ನು ಇವರು ವಿತರಣೆ ಮಾಡುವ ಕಾರ್ಡ್ ಯಾವ ಗ್ಯಾರಂಟಿ? ಚುನಾವಣೆ ಸಂದರ್ಭದಲ್ಲಿ ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಇಂಥ ಸುಳ್ಳು ಭರವಸೆಗಳನ್ನು ಮತದಾರರು ನಂಬಬಾರದು. ಸುಮಾರು 55 ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಯಾವ ಅಭಿವೃದ್ಧಿ ಮಾಡಿಲ್ಲ ಎಂಟು ಬಾರಿ ಜೇವರ್ಗಿ ಕ್ಷೇತ್ರದಿಂದ ಗೆದ್ದ ಧರ್ಮಸಿಂಗ್ ಮುಖ್ಯಮಂತ್ರಿ ಯಾದ್ರು ಹೇಳಿಕೊಳ್ಳುವಂತ ಯಾವ ಕೆಲಸ ಮಾಡಿಲ್ಲ. ಎರಡು ಬಾರಿ ಶಾಸಕರಾದ ಅಜಯ್ ಸಿಂಗ್ ಚುನಾವಣೆ ಸಂದರ್ಭದಲ್ಲಿ ಮಾತ್ರ ಕ್ಷೇತ್ರದಲ್ಲಿ ಓಡಾಟ ಮಾಡುತ್ತಾರೆ. ಕಾಂಗ್ರೆಸ್ ಜೆಡಿಎಸ್ ಚುನಾವಣೆ ಸಂದರ್ಭದಲ್ಲಿ ಮಾತ್ರ ಎದ್ದೇಳುತ್ತವೆ. ಕೋವಿಡ್ ಸಂದರ್ಭದಲ್ಲಿ ಕ್ವಾರಂಟೈನ್ ಲಾಕ್ ಡೌನ್ ಆಗಿದ್ದ ಪಕ್ಷಗಳು ಈಗ ಕಾಣಿಸಿಕೊಳ್ಳುತ್ತೇವೆ ಕೋಡಿ ಸಂದರ್ಭದಲ್ಲಿ ಈ ಎರಡು ಪಕ್ಷಗಳಿಂದ ಜನರಿಗೆ ಯಾವ ಕೊಡುಗೆಯನ್ನು ನೀಡಿಲ್ಲ ಹಾಗಾಗಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳನ್ನು ಮತದಾರರು ಲಾಕ್ಡೌನ್ ಮಾಡಲಿದ್ದಾರೆ ಎಂದು ಹೇಳಿದರು.

70 ವರ್ಷಗಳಿಂದ ದೇಶದ ಮತ್ತು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಾ ಹುಸಿ ಭರವಸೆಗಳನ್ನು ನೀಡುತ್ತಾ ವಂಚಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷ ನೀಡುತ್ತಿರುವ ಸುಳ್ಳು ಗ್ಯಾರಂಟಿ ಕಾರ್ಡನ್ನು ಯಾರು ನಂಬಬೇಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ನಡೆದಿದೆ ಸೂರತ್ ಚೆನ್ನೈ ಎಕ್ಸ್ಪ್ರೆಸ್ ಹೈವೇ ಜವಳಿ ಪಾರ್ಕ್ ಕಲ್ಬುರ್ಗಿ ವಿಮಾನ ನಿಲ್ದಾಣ ಮಾಡಿದು ಬಿಜೆಪಿ ಸರ್ಕಾರ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ್ ಶಾಸಕ ಬಸವರಾಜ್ ಮತ್ತಿಮೊಡ್ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಶಿವರಾಜ್ ಪಾಟೀಲ್ ರದ್ದೇವಾಡಗಿ, ಶೋಭಾ ಭಾಣಿ ಮಲ್ಲಿನಾಥಗೌಡ ಪಾಟೀಲ್ ಯಲಗೋಡ, ದಂಡಪ್ಪ ಸಾಹುಕಾರ್ ಕುಳಗೇರಿ, ಪ್ರವೀಣ್ ತೆಗನೂರ್ ಬಾಗೇಶ್ ಹೊತ್ತಿನಮಡು ಸಂಗನಗೌಡ ರದ್ದೆವಾಡಗಿ ಮತ್ತಿತರರು ಉಪಸ್ಥಿತರಿದ್ದರು.

 

Be the first to comment

Leave a Reply

Your email address will not be published.


*