ತಾಲೂಕಿನ ಕೊರಡಮಪಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯ ಶ್ರೀಶೈಲ ನಾಗಾವಿ ನೇತೃತ್ವದಲ್ಲಿ ಮತದಾರರ ಜಾಗೃತಿ ಅಭಿಯಾನ ನಡೆಸಿದರು
ಗ್ರಾಮಾಂತರ ಪ್ರದೇಶಗಳಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ಆಗುತ್ತಿರುವುದರಿಂದ ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸಲು ಈ ಅಭಿಯಾನ ಕೈಗೊಂಡಿದೆಯೆಂದು ಮುಖ್ಯೋಪಾಧ್ಯಾಯ ಶ್ರೀಶೈಲ ತಿಳಿಸಿದರು
ಬೆಳಗಿನ ಜಾವ ಶಾಲೆಯ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿ ಹಾಗೂ ಓಣಿಗಳಲ್ಲಿ ಪ್ರಭಾತ ಫೇರಿ ನಡೆಸಿ ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಬರುವ ವಿಧಾನಸಭಾ ಚುನಾವಣೆಯಲ್ಲಿ 18 ವರ್ಷ ದಾಟಿದ ಪ್ರತಿಯೊಬ್ಬ ನಾಗರಿಕರು ತಪ್ಪದೇ ಮತದಾನ ಮಾಡುವಂತೆ ಘೋಷಣೆಗಳನ್ನು ಕೂಗಿ ಜನ ಜಾಗೃತಿ ಮೂಡಿಸಿದರು.
Be the first to comment