ಬೆಂಗಳೂರು ಏ. 24;ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಡಾ.ಎಸ್ ರೇಣುಕಾನಂದ (42) ಹೃದಯಾಘಾತದಿಂದ ತೀರಿಕೊಂಡಿದ್ದಾರೆ.
ಕಳೆದ ಹಲವು ದಿನಗಳಿಂದ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ನಿನ್ನೆ ಬೆಳಗ್ಗೆ ಎಂದಿನಂತೆ ಆಸ್ಪತ್ರೆಗೆ ಕರ್ತ್ಯವ್ಯಕ್ಕೆ ಹಾಜರಾದವರು ಮಧ್ಯಾಹ್ನ ಬಿಡುವಿನ ವೇಳೆಯಲ್ಲಿ ವಿಶ್ರಾಂತಿ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುವಾಗ ತೀವ್ರ ಹೃದಯಾಘಾತವಾಗಿ ಅಸು ನೀಗಿದ್ದಾರೆ.
ಮೃತರು ಪತ್ನಿ ,ಇಬ್ಬರು ಮಕ್ಕಳು ,ಸಹೋದರಿ ಹಾಗೂ ತಂದೆ ತಾಯಿಯರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಬೇಲೂರು ತಾಲ್ಲೂಕಿನ ದೊಡ್ಡ ಕೋಡಿಹಳ್ಳಿಯಲ್ಲಿ ಇಂದು ಮಧ್ಯಾಹ್ನ ಹನ್ನೆರಡು ಗಂಟೆಗೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Be the first to comment