ಬೆಂಗಳೂರು: ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ ಫಲಿತಾಂಶ ಬಿಡುಗಡೆ ಆಗುತ್ತಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ.
2022- 2023ನೇ ಸಾಲಿನ SSLC ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಎಲೆಕ್ಷನ್ ರಿಸಲ್ಟ್‌ಗೂ ಎರಡು ದಿನ ಮೊದಲೇ ರಾಜ್ಯದ ಸುಮಾರು 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ SSLC ಫಲಿತಾಂಶ ಪ್ರಕಟವಾಗಲಿದೆ.
Be the first to comment