ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ರಚನೆಗೊಂಡಿದ್ದಂತ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿನ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಇಂದು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ದಿನಾಂಕ 19-11-2022ರಂದು ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯವೇತನ ಆಯೋಗವನ್ನು ರಚಿಸಿ, 6 ತಿಂಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಲಾಗಿತ್ತು ಎಂದಿದ್ದಾರೆ.
ಕರ್ನಾಟಕ 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯ ಕಲಾಪಗಳನ್ನು ಪೂರ್ಣಗೊಳಿಸಿ, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ದಿನಾಂಕ 19-05-2023ರಿಂದ 6 ತಿಂಗಳವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
Be the first to comment