ನವದೆಹಲಿ : ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನು ಮುಂದೂಡಿದೆ.
ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು, ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನು ಮುಂದೂಡಿದೆ.
ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ.
Be the first to comment