ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೇ, ಐದು ಗ್ಯಾರಂಟಿ ಯೋಜನಗಳನ್ನು ಜಾರಿಗೆ ತರುವುದಾಗಿ ಪ್ರಣಾಣಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಇಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ ಹಾಗೂ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಈ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿ, 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ಸೂಚಿಸಲಾಗಿತ್ತು. ಈಗ ಆ ಪಂಚ ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಿ, ಅಧಿಕೃತವಾಗಿ ರಾಜ್ಯ ಸರ್ಕಾರದ ಆದೇಶಿಸಿದೆ.
ಹೌದು ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ಇಂದು ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಐದು ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದರು. ಗೃಹ ಲಕ್ಷ್ಮಿಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2,000, ಗೃಹ ಜ್ಯೋತಿಯಡಿ 200 ಯೂನಿಟ್ ಪ್ರತಿ ತಿಂಗಳು ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500 ನೀಡುವ ಭರವಸೆ ನೀಡಿತ್ತು. ಇದಲ್ಲದೇ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ, ಮಹಿಳೆಯರಿಗೆ ಉಚಿತ ಪ್ರಯಾಣ ನಮ್ಮ ಪ್ರಮಾಣ ಗ್ಯಾರಂಟಿಯಡಿ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಘೋಷಿಸಿತ್ತು. ಈ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ.
ಈ ಎಲ್ಲ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಕಾರ್ಯವಿಧಾನ ಮತ್ತು ಪಾಲಿಸಬೇಕಾದ ಷರತ್ತು, ನಿಬಂಧನೆಗಳ ಬಗ್ಗೆ ಸರ್ಕಾರದಿಂದ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
Be the first to comment