5 ರಿಂದ 10ನೇ ತರಗತಿ ಬಾಲಕ, ಬಾಲಕಿಯರ ಗಮನಕ್ಕೆ..ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

CHETAN KENDULI

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ.
5 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಬಾಗಲಕೋಟೆ:(ಹುನಗುಂದ)ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಸತಿ ನಿಲಯಗಳಿಗೆ 2023-24ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.5 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅದರಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಶದ ವಿಳಾಸ https://shp.karnataka.gov.in ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು 15-06-2023 ಕೊನೆಯ ದಿನವಾಗಿದ್ದು, ಈ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಮೇಗಲಪೇಟೆ ರಾಜಿವ್ ಗಾಂಧಿ ಶಾಲೆ ಹಿಂಭಾಗ ಹುನಗುಂದ ಇವರಲ್ಲಿ ಹಾಗೂ ಮೋಬೈಲ್ ಸಂಖ್ಯೆ:8497850515 ಇವರನ್ನು ಸಂಪರ್ಕಿಸಲು ತಿಳಿಸಿದೆ.

Be the first to comment

Leave a Reply

Your email address will not be published.


*