ವಿವಿಧ ಜಾಗೃತಿ ಜಾಥಾಕ್ಕೆ ಡಿಸಿ, ಸಿಇಓ ಚಾಲನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

CHETAN KENDULI

ಬಾಗಲಕೋಟೆ: ವಿಶ್ವ ತಂಬಾಕು ರಹಿತ ದಿನಾಚರಣೆ, ವಿಶ್ವ ಮಲೇರಿಯಾ ದಿನಾಚರಣೆ, ರಾಷ್ಟ್ರೀಯ ಡೆಂಗ್ಯೂ, ವಿಶ್ವ ಸ್ಕಿಜೋಪ್ರೀನಿಯಾ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಮತ್ತು ಜಿ.ಪಂ ಸಿಇಓ ಟಿ.ಭೂಬಾಲನ್ ಬುಧವಾರ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ವಿವಿಧ ದಿನಾಚರಣೆಗಳ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ಜಾಗೃತಿ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಬಸ್ ನಿಲ್ದಾಣ, ಪೊಲೀಸ್ ಪ್ಯಾಲೇಸ್, ಎಲ್.ಐ.ಸಿ ವೃತ್ತದ ಮಾರ್ಗವಾಗಿ ಸಂಚರಿಸಿ ಜಿಲ್ಲಾ ಆಸ್ಪತ್ರೆಗೆ ಮುಕ್ತಾಯವಾಯಿತು. ಜಾಥಾದೂದ್ದಕ್ಕೂ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ದೃಷ್ಪರಿಣಾಮ, ಮಲೇರಿಯಾ, ಡೆಂಗ್ಯೂ ಕುರಿತು ಜಾಗೃತಿ ಫಲಕಗಳನ್ನು ಪ್ರದರ್ಶಿಸುವದರ ಜೊತೆಗೆ ಘೋಷಣೆಗಳನ್ನು ಕೂಗಿದರು. ಜಾಥಾದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಡಿಎಲ್‌ಓ ಅಧಿಕಾರಿ ಡಾ.ಶಿವನಗೌಡ ಪಾಟೀಲ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ ಸೇರಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published.


*