ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಈಗ ಅವರ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
2022ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಾನೂನು ಭಂಗ ಮಾಡಿತ್ತು. ಈ ಹಿನ್ನಲೆಯಲ್ಲಿ ಐದು ಪ್ರಕರಣಗಳು ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದವು.
ಕೋವಿಡ್-19 ವೇಳೆಯಲ್ಲೇ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿ ಆದೇಶಿಸಿದೆ.
Be the first to comment