ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ವಾಣಿಜ್ಯ ಬಳಕೆ ಹೊರತುಪಡಿಸಿ ಪ್ರತಿ ಮನೆಗೆ 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡುವುದು ಗೃಹಜ್ಯೋತಿ ಯೋಜನೆಯ ಉದ್ದೇಶವಾಗಿದೆ. ಆದರೆ, ರಾಜ್ಯದ ಬಹುತೇಕ ಮನೆಗಳಲ್ಲಿ 200 ಯೂನಿಟ್ ವಿದ್ಯುತ್ ಬಳಸುವುದೇ ಇಲ್ಲ. ಹಾಗಾಂತ ಯದ್ವಾತದ್ವಾ ವಿದ್ಯುತ್ ಬಳಸುವ ಆಗಿಲ್ಲ. ಏಕೆಂದರೆ, ಪ್ರತಿ ತಿಂಗಳು ಪ್ರತಿ ಕುಟುಂಬಗಳು ಬಳಸುವ ವಿದ್ಯುತ್ ಯೂನಿಟ್ ಮೇಲೆ ಹೆಚ್ಚುವರಿಯಾಗಿ ಶೇ. 10 ರಷ್ಟು ವಿದ್ಯುತ್ ಬಳಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಅದಕ್ಕಿಂತ ಮಿತಿ ಮೀರಿದರೆ ಹೆಚ್ಚುವರಿ ವಿದ್ಯುತ್ ಬಳಕೆಯ ಬಿಲ್ ಕಟ್ಟಬೇಕು. ಅಲ್ಲದೆ, 200 ಯೂನಿಟ್ಗಿಂತ ಹೆಚ್ಚು ಬಳಸಿದರೆ ಪೂರ್ತಿ ಬಿಲ್ ಮೊತ್ತ ಪಾವತಿಸಬೇಕಾಗುತ್ತದೆ ಎಂದು ಇಂಧನ ಇಲಾಖೆ ಹೇಳಿದೆ.
ಅಂದಹಾಗೆ ಅರ್ಜಿ ಪ್ರಕ್ರಿಯೆ ತುಂಬಾ ಸರಳವಾಗಿದೆ. ಜನರು ಇಂಟರ್ನೆಟ್ ಕೇಂದ್ರಗಳಲ್ಲಿ ಕ್ಯೂನಲ್ಲಿ ನಿಂತು ಪರದಾಡುವುದನ್ನು ತಪ್ಪಿಸುವಎಲ್ಲಾ ಉದ್ದೇಶದಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್ ಜತೆಗೆ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರ, ನಾಡಕಚೇರಿ ಸೇರಿದಂತೆ ಎಲ್ಲ ವಿದ್ಯುತ್ ಕಚೇರಿಗಳಲ್ಲೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಗ್ರಾಹಕರು ಸರ್ಕಾರದ ಸೇವಾಸಿಂಧು (https://sevasindhugs.karnataka.gov.in/gruhajyothi) ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
Be the first to comment