ಬಾಗಲಕೋಟೆ:ಹುನಗುಂದ ಇಲಕಲ್ಲ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ತಾಲ್ಲೂಕು ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 15 ರಿಂದ 17 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ದಾಖಲೆಗಳೊಂದಿಗೆ ಇಲಾಖೆಯ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.
ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ 3 ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪುವೇಶಕ್ಕಾಗಿ ಹೊಸದಾಗಿ ಪುವೇಶ ಬಯಸುವ ಪವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ,ಪ.ಪಂ ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ
ಎಸ್.ಸಿ & ಎಸ್.ಟಿ, ಪವರ್ಗ-1 ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1ಲಕ್ಷದೊಳಗಿರಬೇಕು. ವಿದ್ಯಾರ್ಥಿಗಳು https://shp,karnataka.gov.in ಅನ್ನು ಸಂಪರ್ಕಿಸಿ ಆನ್ ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಆನೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.07.2023 ಆಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಮೇಗಲಪೇಟೆ ರಾಜಿವ್ ಗಾಂಧಿ ಶಾಲೆ ಹಿಂಭಾಗ ಹುನಗುಂದ ಇವರಲ್ಲಿ ಹಾಗೂ ಮೋಬೈಲ್ ಸಂಖ್ಯೆ:8497850515 ಇವರನ್ನು ಸಂಪರ್ಕಿಸಲು ತಿಳಿಸಿದೆ.
Be the first to comment