ಮಸ್ಕಿ, ಬಳಗಾನೂರು ಪಟ್ಟಣದ ವಾರ್ಡ್ ನಂ. 7 ರ ಅಂಗನವಾಡಿ ಕೇಂದ್ರದಿಂದ ಶುಕ್ರವಾರ ರಾತ್ರಿ ಸಮಯದಲ್ಲಿ ಮಕ್ಕಳಿಗೆ ವಿತರಿಸುವ ಆಹಾರ ಸಾಮಗ್ರಿಗಳನ್ನು ಬೈಕ್ ನಲ್ಲಿ ಸಾಗಾಟ ಮಾಡಿರುವ ಆರೋಪ ಕೇಳಿ ಬಂದಿದೆ.
ಮಸ್ಕಿ ತಾಲೂಕಿನ ಬಳಗನೂರು ಪಟ್ಟಣದ ಬಸವೇಶ್ವರನಗರದ ವಾರ್ಡ್ ನಂ. 7 ರಲ್ಲಿರುವ ಅಂಗನವಾಡಿ ಕೇಂದ್ರದಿಂದ ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿತರಿಸುವ ಆಹಾರ ಪದಾರ್ಥಗಳನ್ನು ಅಲ್ಲಿನ ಸಿಬ್ಬಂದಿಗಳೇ ಶಾಮಿಲ್ ಆಗಿ ಖಾಸಗಿ ವ್ಯಕ್ತಿಗಳಿಗೆ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಕೂಡಲೇ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಆಹಾರ ಪದಾರ್ಥಗಳನ್ನು ಕಾಳ ಸಂತೆಯಲ್ಲಿ ಮಾರಾಟವಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಡಿ.ಎಸ್.ಎಸ್ ಸಂಘಟನೆಯ ರಾಯಚೂರು ಜಿಲ್ಲಾ ಅಧ್ಯಕ್ಷರಾದ ಮಲ್ಲಪ್ಪ ಗೋನಾಳ ಪತ್ರಿಕೆಯ ಮೂಲಕ ಒತ್ತಾಯಿಸಿದ್ದಾರೆ.
ಕೋಟ್ 1-ಬಳಗಾನೂರ ಅಂಗನವಾಡಿ ಕೇಂದ್ರದಿಂದ ಆಹಾರ ಪದಾರ್ಥಗಳನ್ನು ಬೇರೆಡೆಗೆ ಸವಿಸುತ್ತಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಅಲ್ಲಿಗೆ ನಮ್ಮ ಅಧಿಕಾರಿಗಳನ್ನು ಕಳುಹಿಸಿದ್ದು ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು.ಅಶೋಕ ಸಿಡಿಪಿಒ ಸಿಂಧನೂರು
ಕೋಟ್ 2
ಮಸ್ಕಿ ತಾಲೂಕಿನ ಬಳಗನೂರು ಪಟ್ಟಣದ ಬಸವೇಶ್ವರ ನಗರದ ಅಂಗನವಾಡಿ ಕೇಂದ್ರದಿಂದ ಮಕ್ಕಳಿಗೆ ವಿತರಿಸುವ ಆಹಾರ ಪದಾರ್ಥಗಳನ್ನು ಕಳೆದ ಸುಮಾರು ದಿನಗಳಿಂದ ದಿನನಿತ್ಯವೂ ಕಾಲ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಇದರ ಬಗ್ಗೆ ಅಧಿಕಾರಿಗಳು ಗಮನಕ್ಕೆ ತಂದರು ಕೂಡ ಕ್ರಮ ಕೈಗೊಂಡಿಲ್ಲ. ಕ್ರಮ ಕೈಗೊಳ್ಳದೆ ಹೋದರೆ ಸಂಬಂಧಪಟ್ಟ ಅಧಿಕಾರಿಗಳು ಇವರ ಮೇಲೆ ಕಾನೂನು ಶಿಸ್ತ ಕ್ರಮ ಕೈಗೊಳ್ಳಬೇಕೆಂದು ವಿನಂತಿ.ಮಲ್ಲಪ್ಪ ಗೋನಾಳಡಿ ಎಸ್ ಎಸ್ ಜಿಲ್ಲಾ ಅಧ್ಯಕ್ಷರು ರಾಯಚೂರು
Be the first to comment