ಬಾಗಲಕೋಟೆ:ಇಲಕಲ್ಲ ತಾಲ್ಲೂಕಿನ ಕೆಲೂರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಮಹಾಲಿಂಗೇಶ ನಾಡಗೌಡರ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ರತ್ನಾ ಬಸವರಾಜ ಮಾದರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷರ ಅವದಿ ಮುಕ್ತಾಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 3ಬಿ ಮಿಸಲಾತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮಹಾಲಿಂಗೇಶ ನಾಡಗೌಡರ ನಾಮಪತ್ರ ಸಲ್ಲಿಸಿದ್ದರು.ಉಪಾದ್ಯಕ್ಷ ಸ್ಥಾನ ಪ.ಜಾತಿ ಮಹಿಳಾ ಮೀಸಲಾತಿಗೆ ರತ್ನಾ ಮಾದರ ನಾಮಪತ್ರ ಸಲ್ಲಿಸಿದ್ದರು.
ಮಹಾಲಿಂಗೇಶ ಮಾತನಾಡಿ, ‘ಸರ್ಕಾರದ ಸವಲತ್ತುಗಳನ್ನು ಗ್ರಾ.ಪಂ. ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಅಭಿವೃದ್ಧಿಗೆ ಎಲ್ಲಾ ಸದಸ್ಯರ ಜೊತೆಗೂಡಿ ಶ್ರಮಿಸುತ್ತೇನೆ’ ಎಂದರು.ಗ್ರಾಮಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.ಮಹಾಲಿಂಗೇಶ ಅವರ ಬೆಂಬಲಿಗರು ಸಿಹಿ ವಿತರಿಸಿ ಸಂಭ್ರಮಿಸಿದರು.ಗ್ರಾ.ಪಂ. ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.
Be the first to comment