ರಾಜ್ಯ ಸುದ್ದಿಗಳು
ಈಗೀಗ ನಗರಗಳಲ್ಲಿ ಹಾಗೂ ಗ್ರಾಮೀಣ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ. ಜೊತೆಗೆ ಮನೆಯಲ್ಲಿ ನಾಯಿಯನ್ನು ಮುದ್ದು ಮಗುವಿನಂತೆ ಸಾಕಿ ಜೋಪಾನ ಮಾಡುವ ಶ್ವಾನ ಪ್ರಿಯರಿಗೂ ಕೊರತೆಯಿಲ್ಲ.
ತಪಾಸಣೆಗಾಗಿ ಸಮುದಾಯ ಆರೋಗ್ಯ ಅಧಿಕಾರಿ ಭೇಟಿ ನೀಡಿ ತೆರಳುವ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಯಮೇಲೆ ಸಾಕು ನಾಯಿ ದಾಳಿ ಮಾಡಿ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಹಿನ್ನೆಲೆಯಲ್ಲಿ ನಾಯಿ ಮಾಲೀಕರ ಮೇಲೆ ಪ್ರಕರಣ ದಾಖಲಾಗಿರುತ್ತದೆ.
ಸಾರ್ವಜನಿಕರು ತಮ್ಮ ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲಿಕರ ಮೇಲೆ section 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ 6 ತಿಂಗಳ ಜೈಲುವಾಸ ಹಾಗೂ ದಂಡ ವಿಧಿಸಲಾಗುವುದು.ತಮ್ಮ ಮನೆಯ ಸಮೀಪ ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೋಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Be the first to comment